ಸೆ.21ರಂದು ಎಸ್‌ಕೆಪಿಎ 35ನೇ ವಾರ್ಷಿಕ ಮಹಾಸಭೆ
ಉಡುಪಿ, ಸೆ.20: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿ ಯೇಶನ್(ಎಸ್‌ಕೆಪಿಎ) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ ಸೆ.21ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.
ಎಸ್‌ಕೆಪಿಎ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಅಧ್ಯಕ್ಷತೆ ವಹಿಸಲಿರುವರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು - ಉಡುಪಿ ಜಿಲ್ಲೆಯ ಸಂಚಾಲಕ ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಸ್‌ಕೆಪಿಎ ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ ಛಾಯಾ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





