ಜು.22: ಕಾರಂತರ ಕುರಿತು ಡಾ.ಬಿಳಿಮಲೆ ಉಪನ್ಯಾಸ
ಉಡುಪಿ, ಜು.19: ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಉಡುಪಿಯ ರಥಬೀದಿ ಗೆಳೆಯರು ಸಹ ಯೋಗದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆಯಲ್ಲಿ 7ನೇ ಕಾರ್ಯಕ್ರಮ ಜುಲೈ 22ರಂದು ಸಂಜೆ 4ಗಂಟೆಗೆ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಹೆನ್ರಿ ಡುನ್ಯಾಂಟ್ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಡಾ.ಶಿವರಾಮ ಕಾರಂತರ ಬದುಕು ಮತ್ತು ಬರಹಗಳ ಪ್ರಸ್ತುತತೆ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿ ಸಂವಾದ ನಡೆಸಲಿದ್ದಾರೆ.
ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ಭಾಷಾ ವಿಜ್ಞಾನಿ ನಾಡೋಜ ಡಾ.ಕೆ.ಪಿ ರಾವ್, ಉಡುಪಿ ರಥಬೀದಿ ಗೆಳೆಯರು ಅಧ್ಯಕ್ಷ ಉದ್ಯಾವರ ನಾಗೇಶ್‌ಕುಮಾರ್ ಭಾಗಹಿವಸಲಿದ್ದಾರೆ ಎಂದು ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.
Next Story





