ಫೆ.23ರಂದು ಸಂವಿಧಾನ ತಿಳಿಯೋಣ ಕಾರ್ಯಕ್ರಮ
ಉಡುಪಿ: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸುವರ್ಣ ಸಂಭ್ರಮ ವರ್ಷದ ಫೆಬ್ರವರಿ ತಿಂಗಳ ಕಾರ್ಯಕ್ರಮ ವಾಗಿ ’ಸಂವಿಧಾನ ತಿಳಿಯೋಣ’ ಕಾರ್ಯಕ್ರಮವನ್ನು ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಫೆ.23ರಂದು ಬೆಳಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಯಾಗಿ ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ಆತ್ರಾಡಿ ಅಮೃತಾ ಶೆಟ್ಟಿ ಆಗಮಿಸಲಿದ್ದಾರೆ. ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳಿಗೆ ವಾಣಿ ಪೆರೋಡಿಯವರ ’ಮಕ್ಕಳಿಗಾಗಿ ಸಂವಿಧಾನ’ ಕೃತಿ ವಿತರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ತಿಲಕ್ ರಾಜ್ ಸಾಲಿಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





