ಜ.23ರಂದು ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
ಉಡುಪಿ, ಜ.21: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯ ಉದ್ಘಾಟನಾ ಸಮಾರಂಭವು ಜ.23ರಂದು ಸಂಜೆ 4ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಚೇರಿಯನ್ನು ರಾಜ್ಯ ಗೃಹ ಸಚಿವ ಹಾಗೂ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಉದ್ಘಾಟಿಸಲಿರುವರು ಎಂದು ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಹರಿಪ್ರಸಾದ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





