ಜ.23ರಂದು ಕರ್ನಾಟಕ ಕ್ರೀಡಾಕೂಟಕ್ಕೆ ತೆರೆ: ರಾಜ್ಯಪಾಲರ ಆಗಮನ

ಉಡುಪಿ, ಜ.22: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭವು ಜ.23ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ.ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯಪಾರ ಪ್ರವಾಸ: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜ.23ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 2.35ಕ್ಕೆ ಉಡುಪಿ ನಗರಕ್ಕೆ ಆಗಮಿಸುವ ಅವರು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





