ಆ.23ರಂದು ಗೃಹ ಸಚಿವ ಡಾ.ಪರಮೇಶ್ವರ್ ಉಡುಪಿ ಜಿಲ್ಲೆಯಲ್ಲಿ ಪ್ರವಾಸ

ಉಡುಪಿ, ಆ.21: ಕರ್ನಾಟಕ ಸರಕಾರದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ ಆ.23ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ ಉಡುಪಿಗೆ ಆಗಮಿಸುವ ಸಚಿವರು, 11ರಿಂದ 12:30ರವರೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಆಶ್ರಯದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಕಿರಿಯರ ಹಾಗೂ 23ವರ್ಷದೊಳಗಿನವರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಅಪರಾಹ್ನ 2:00 ಗಂಟೆಗೆ ಮಣಿಪಾಲದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ ಭೇಟಿ ನೀಡುವ ಅವರು, 3:00 ಗಂಟೆಗೆ ನಗರದ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ನಡೆಯುವ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸುವರು. ಸಂಜೆ 4:30ಕ್ಕೆ ಕಾಪುವಿನ ರಾಜೀವ್ ಗಾಂಧಿ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





