ಅ.23ರಂದು ವಕ್ಫ್ ಆಸ್ತಿ ಬಗ್ಗೆ ಮಾಹಿತಿ ಕಾರ್ಯಾಗಾರ

ಉಡುಪಿ, ಅ.21: ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಆಸ್ತಿಗಳನ್ನು ಯುಡಬ್ಲ್ಯುಎಂಇಇಡಿ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಅ.23ರಂದು ಪೂರ್ವಾಹ್ನ 11 ಗಂಟೆಗೆ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಅಧ್ಯಕ್ಷರು/ಕಾರ್ಯದರ್ಶಿಗಳು, ಮುತವಲ್ಲಿಗಳು, ಆಡಳಿತಾಧಿಕಾರಿಗಳು ಹಾಗೂ ಕೇರ್‌ಟೇಕರ್‌ಗಳಿಗೆ ವಕ್ಸ್ ಕಾಯ್ದೆ ಕಲಂ 32(2)(ಡಿ) ಅಡಿಯಲ್ಲಿ ಪೋರ್ಟಲ್‌ನಲ್ಲಿ ಮೇಕರ್ ಆಗಿ ನೋಂದಣಿ ಮಾಡಿಕೊಳ್ಳುವುದು ಹಾಗೂ ತಮ್ಮ ಸಂಸ್ಥೆಗಳ ವಕ್ಫ್ ಆಸ್ತಿಗಳ ದಾಖಲೆಗಳನ್ನು ಅಪ್ಲೋಡ್ ಮಾಡುವುದು ಕಡ್ಡಾಯ ಎಂದು ಕರ್ನಾಟಕ ರಾಜ್ಯ ವಕ್ಸ್ ಮಂಡಳಿ ಸೂಚಿಸಿದೆ.
ನೋಂದಣಿ ಮತ್ತು ದಾಖಲೆ ಅಪ್ಲೋಡ್ ಕಾರ್ಯವನ್ನು 30ದಿನಗಳ ಒಳಗೆ ಪೂರ್ಣಗೊಳಿಸಬೇಕಾಗಿದ್ದು ಆದುದರಿಂದ ಈ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ವಕ್ಪ್ ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು, ಮುತವಲ್ಲಿ ಗಳು, ಅಡಳಿತಾಧಿಕಾರಿಗಳು ಹಾಗೂ ಕೇರ್‌ಟೇಕರ್‌ಗಳು ಹಾಜರಿರಬೇಕೆಂದು ಜಿಲ್ಲಾ ವಕ್ಪ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





