ಅ.23ಕ್ಕೆ ಯಕ್ಷಪೋಷಕ ಗೌರವ ಪ್ರಶಸ್ತಿ ಪ್ರದಾನ

ಉಡುಪಿ, ಆ.20: ಮಾಹೆ ವಿವಿಯ ಯಕ್ಷಗಾನ ಕೇಂದ್ರವು ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷ ಪೋಷಕ ಗೌರವ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಯಜಮಾನರಾದ ವೈ.ಕರುಣಾಕರ ಶೆಟ್ಟಿ ಅವರಿಗೆ ಆ.23ರಂದು ಸಂಜೆ 4 ಗಂಟೆಗೆ ಅಜ್ಜರಕಾಡಿನ ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಮಾಹೆಯ ಸಹಕುಲಾಧಿಪತಿ ಗಳೂ ಆದ ಡಾ.ಎಚ್. ಎಸ್. ಬಲ್ಲಾಳ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಿ. ಶಂಕರ್, ಪುರುಷೋತ್ತಮ ಶೆಟ್ಟಿ, ಪಳ್ಳಿ ಕಿಶನ್ ಹೆಗ್ಡೆ, ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿರುವರು.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಪ್ರಸಿದ್ಧ ಯಕ್ಷಗಾನ ದಿಗ್ಗಜರಿಂದ ಕೃಷ್ಣಾರ್ಜುನ ಕಾಳಗ ಯಕ್ಷಗಾನ ನಡೆಯಲಿದೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story




