ಜೂ.24ಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉಡುಪಿಗೆ

ಉಡುಪಿ, ಜೂ.21: ಕರ್ನಾಟಕ ಸರಕಾರದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಜೂನ್ 24ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಂಗಳವಾರ ಅಪರಾಹ್ನ 1:00 ಗಂಟೆಗೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಶ್ರೀಕೋಟಿ ಲಿಂಗೇಶ್ವರ ದೇವಾಲಯಕ್ಕೆ ಭೇಟಿ ಹಾಗೂ ಕೋಟೇಶ್ವರ ಸೇವಾ ಟ್ರಸ್ಟ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ 3:00 ಗಂಟೆಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡುವ ಸಚಿವರು ಇಲಾಖಾ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story





