25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಕುಂದಾಪುರ, ಜ.29: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಜ.28ರಂದು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾರೆ.
ಮುಂಬೈಯ ಹನೀಫ್ ಬಂಧಿತ ಆರೋಪಿ. ಈತ 1999ನೇ ಸಾಲಿನಲ್ಲಿ ಖೋಟಾ ನೋಟು ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆ ಹೊಂದಿ ಸುಮಾರು 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಿಸಿ ಕೊಂಡಿದ್ದನು. ಈ ಪ್ರಕರಣದಲ್ಲಿ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಅದರಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಸೈ ನೂತನ್ ಡಿ. ಮತ್ತು ಸಿಬ್ಬಂದಿ ರಾಜು, ಅಶೋಕ್ ಶೆಟ್ಟಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕುಂದಾಪುರಕ್ಕೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Next Story





