ಫೆ.25ರಂದು ಮಲಬಾರ್ ಗೋಲ್ಡ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ, ಫೆ.22: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧಿನದಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿ ಯಿಂದ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ವಿದ್ಯಾರ್ಥಿಗಳಿಗೆ 28 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಫೆ.25ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಅಜ್ಜರಕಾಡು ಟೌನ್ ಹಾಲ್ ಸಭಾಂಗಣ ದಲ್ಲಿ ಅಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಯಶ್ಫಾಲ್ ಸುವರ್ಣ, ಗುರುರಾಜ್ ಗಂಟಿ ಹೊಳೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಮೊದಲಾದವರು ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





