ಸೆ.25ರಂದು ಸಚಿವ ಶಿವರಾಜ ತಂಗಡಗಿ ಉಡುಪಿಗೆ ಭೇಟಿ

ಉಡುಪಿ, ಸೆ.24: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸೆ.25ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ರಾತ್ರಿ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವರು ಸೆ.25ರಂದು ಬೆಳಗ್ಗೆ 10 ಗಂಟೆಗೆ ಉಚ್ಚಿಲದ ಮೊಗವೀರ ಭವನದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಹಾಗೂ ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ ಮತ್ತು ಗುರಿಕಾರರಿಗೆ ಗೌರವಧನ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story




