Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜ.26ರಿಂದ ಉಡುಪಿ ಜಿಲ್ಲೆಯಾದ್ಯಂತ...

ಜ.26ರಿಂದ ಉಡುಪಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಡಿಸಿ ಡಾ.ಕೆ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ18 Jan 2024 10:22 PM IST
share
ಜ.26ರಿಂದ ಉಡುಪಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ: ಡಿಸಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ, ಜ.18: ಜನಸಾಮಾನ್ಯರಲ್ಲಿ ನಮ್ಮ ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ‘ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮ ಜಿಲ್ಲೆಯಾದ್ಯಂತ ಜನವರಿ 26ರಿಂದ ಫೆಬ್ರವರಿ 23ರವರೆಗೆ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ನಮ್ಮ ದೇಶದ ಸಂವಿಧಾನದ ಕುರಿತು ಪ್ರತಿಯೊಬ್ಬರೂ ಮಾಹಿತಿ ಹೊಂದಿರಬೇಕು ಎಂಬ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಸಂವಿ ಧಾನ ದಿನಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಲಿದೆ ಎಂದರು.

ಜಾಗೃತಿ ಜಾಥಾ ಸ್ಥಬ್ಧಚಿತ್ರಕ್ಕೆ ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವರು ಅಜ್ಜರಕಾಡು ಮಹತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ. ಸ್ಥಬ್ಧಚಿತ್ರಗಳು ಜಿಲ್ಲೆಯ ಎರಡು ಭಾಗವಾಗಿ ಎಲ್ಲಾ 155 ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸಲಿವೆ ಎಂದು ವಿವರಿಸಿದರು.

ಗ್ರಾಪಂ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಂವಿಧಾನ ಕುರಿತು ಉಪನ್ಯಾಸಕರಿಂದ ಭಾಷಣವಿರಲಿದೆ. ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂವಿಧಾನ ಕುರಿತು ಪ್ರಬಂಧ ಸ್ಫರ್ಧೆ, ಚಿತ್ರಕಲೆ ಹಾಗೂ ಭಾಷಣ ಸ್ಫರ್ಧೆ ನಡೆಯಲಿದೆ. ವಿಜೇತರಿಗೆ ಗ್ರಾಮ ಪಂಚಾಯತಿ ಮೂಲಕ ಬಹುಮಾನ ವಿತರಣೆಯೂ ನಡೆಯಲಿದೆ ಎಂದರು.

ಸ್ಥಬ್ಧಚಿತ್ರದ ಮೆರವಣಿಗೆಯೊಂದಿಗೆ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಟ್ಯಾಬ್ಲೋದಲ್ಲಿ ಭಾರತದ ಸಂವಿಧಾನ ಪೀಠಿಕೆ, ಡಾ.ಬಿ.ಆರ್ ಅಂಬೇಡ್ಕರ್ ಪರಿಕಲ್ಪನೆ ಹಾಗೂ ಪುತ್ಥಳಿ, ಬಸವಣ್ಣನವರ ವಚನಗಳು, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಸರ್ಕಾರದ ಐದು ಯೋಜನೆಗಳ ವಿವರ ಇರಲಿದೆ ಹಾಗೂ ಇದೇ ಸಂದರ್ಭದಲ್ಲಿ ಸಂವಿಧಾನ ಜಾಗೃತಿಯ ಕರಪತ್ರಗಳನ್ನು ಪ್ರತಿಯೊಬ್ಬರಿಗೂ ವಿತರಿಸಲಾಗುವುದು ಎಂದರು.

ಜಾಥಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಶಿಸ್ತು ಬದ್ಧವಾಗಿ ನಡೆಸಲು ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಭೆಯನ್ನು ನಡೆಸಬೇಕು. ಪ್ರತೀ ಗ್ರಾಮಪಂಚಾಯತಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಳನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸುವುದರೊಂದಿಗೆ ಜಾಥಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಿ, ಯಶಸ್ವಿಗೊಳಿಸಬೇಕು ಎಂದರು.

ಗ್ರಾಮ ಪಂಚಾಯತಿಯಲ್ಲಿ ನಡೆಯುವ ಜಾಥಾ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಾಜು ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅನುಷ್ಠಾನಾ ಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಿ ತಿಯ ಸದಸ್ಯರುಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X