ಅ.26ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ, ಅ.24: ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ರೆಡ್‌ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋಟರಿ ಕ್ಲಬ್ ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ಲಯನ್ಸ್ ಕ್ಲಬ್ ಹಿರಿಯಡ್ಕ ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅ. 26ರಂದು ಕಾರ್ಕಳದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ನಡೆಯಲಿದೆ.
ಆಸಕ್ತ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪೋಷಕರು ಶಿಬಿರದಲ್ಲಿ ಭಾಗವಹಿಸಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





