Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.26, 27: ಗ್ರಾಮ ಆಡಳಿತ ಹುದ್ದೆಗಳ ನೇರ...

ಅ.26, 27: ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಪರೀಕ್ಷೆ

ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಸಿ: ಎಡಿಸಿ

ವಾರ್ತಾಭಾರತಿವಾರ್ತಾಭಾರತಿ23 Oct 2024 7:49 PM IST
share
ಅ.26, 27: ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಪರೀಕ್ಷೆ

ಉಡುಪಿ, ಅ.23: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ಅ.26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2 ಹಾಗೂ ಅ.27ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ನಿಯೋಜಿ ಸಲಾದ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಹುದ್ದೆಗಳ ನೇರ ನೇಮಕಾತಿಗೆ ನಡೆಸಲಾಗುವ ಪರೀಕ್ಷೆಗೆ ಸಂಬಂಧಿಸಿಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡ ಲಾದ ತಂಡಗಳು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ-2ಗೆ ಸಂಬಂಧಿಸಿದಂತೆ ಅ.26ರಂದು ಉಡುಪಿ ತಾಲೂಕಿನ ಎರಡು ಪರೀಕ್ಷಾ ಕೇಂದ್ರ ಗಳಲ್ಲಿ ಅಪರಾಹ್ನ 2:30ರಿಂದ 4:30ರವರೆಗೆ ಪರೀಕ್ಷೆ ನಡೆಯಲಿದ್ದು, ಒಟ್ಟು 797 ಅಭ್ಯರ್ಥಿಗಳು ಹಾಗೂ ಅ.27ರಂದು ಜಿಲ್ಲೆಯ 13 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಅವಧಿಗಳಲ್ಲಿ ಬೆಳಗ್ಗೆ 10:30ರಿಂದ ಅಪರಾಹ್ನ 12:30 ರವರೆಗೆ ಹಾಗೂ ಬಳಿಕ 2:30ರಿಂದ ಸಂಜೆ 4:30ರವರೆಗೆ ನಡೆಯಲಿದ್ದು, ಒಟ್ಟು 6004 ಅಭ್ಯರ್ಥಿ ಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದರು.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಪೆನ್‌ಡ್ರೈವ್, ಮೈಕ್ರೋಫೋನ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್‌ವಾಚ್ ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಹಾಗೂ ಸ್ಟೇಷನರೀಸ್, ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯು ವುದನ್ನು ನಿಷೇಧಿಸಲಾಗಿದೆ ಎಂದರು.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಹಾಗೂ ಸರಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು. ತುಂಬು ತೋಳಿನ ಶರ್ಟ್, ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್ ಮೆಟಲ್ (ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಧರಿಸಿ ಹಾಜರಾಗು ವುದನ್ನು ನಿಷೇಧಿಸಲಾಗಿದೆ ಎಂದರು.

ಅದೇ ರೀತಿ ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿ ರಬೇಕು ಅಂದರೆ, ಜಿಪ್ ಪಾಕೆಟ್‌ಗಳು, ಪಾಕೆಟ್‌ ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟನ್‌ಗಳು ಇರಬಾರದು. ಪರೀಕ್ಷೆ ವೇಳೆಯಲ್ಲಿ ಶೂ, ಸಾಕ್ಸ್‌ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸ ಬಹುದಾಗಿದೆ ಎಂದ ಅವರು, ಯಾವುದೇ ರೀತಿಯ ಫೇಸ್‌ಮಾಸ್ಕ್ ಹಾಗೂ ತಲೆಯ ಮೇಲೆ ಟೋಪಿಯನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಬಾರದು ಎಂದರು.

ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಲು ಪೊಲೀಸ್ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವೀಕ್ಷಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಖಜಾನಾಧಿಕಾರಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಗೊಂಡಿ ರುವ ಅಧಿಕಾರಿಗಳು ತಮಗೆ ನೀಡಿರುವ ಕರ್ತವ್ಯಗಳನ್ನು ಉತ್ತಮ ರೀತಿಯಲ್ಲಿ ನ್ಯಾಯೋಚಿತವಾಗಿ ನಿರ್ವಹಿಸಬೇಕು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯುವ ಸಮಯದಲ್ಲಿ ಉಸ್ತುವಾರಿ ತಂಡಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರ ಗಳ ಸುತ್ತಲೂ 200 ಮೀ. ಪರಿಮಿತಿಯೊಳಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗುವುದು. ಈ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳನ್ನು ಪ್ರವೇಶಿಸು ವುದನ್ನು ನಿಬರ್ಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದರು.

ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಪ್ರಾಧಿಕಾರವು ನಿಗದಿಪಡಿ ಸಿರುವ ಸೂಚನೆಗಳನ್ನು ಸಂಬಂಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯ ವಾಗಿ ಪಾಲಿಸತಕ್ಕದ್ದು ಎಂದ ಅವರು, ಪರೀಕ್ಷಾ ಕೇಂದ್ರಗಳಿಗೆ, ಗೋಡೆ ಗಡಿಯಾರಗಳ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ, ಪರೀಕ್ಷಾ ಸಮಿತಿಯ ಸದಸ್ಯರು ನಿರ್ವಹಿಸಬೇಕಾದ ವಿವಿಧ ಕರ್ತವ್ಯಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಎಎಸ್‌ಪಿ ಟಿ.ಸಿದ್ದಲಿಂಗಪ್ಪ, ಡಿಡಿಪಿಯು ಮಾರುತಿ, ತಾಲೂಕು ಗಳ ತಹಶೀಲ್ದಾರರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು, ಮೇಲ್ವಿಚಾರಕರು ಸಭೆ ಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X