ಸೆ.27ಕ್ಕೆ ಉಡುಪಿಯಲ್ಲಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಸೆ.23: ಪ್ರಸಕ್ತ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ವಾಲಿಬಾಲ್, ಕಬಡ್ಡಿ, ಲಾನ್‌ಟೆನಿಸ್, ಟೇಬಲ್‌ಟೆನಿಸ್, ಕುಸ್ತಿ, ಬಾಕ್ಸಿಂಗ್ ಮತ್ತು ವುಷು ಸ್ಪರ್ಧೆಗಳು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27ರಂದು ನಡೆಯಲಿವೆ.
ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿವೆ. ಉಡುಪಿ ಜಿಲ್ಲೆಯಿಂದ ಭಾಗವಹಿಸುವ ಕ್ರೀಡಾಪಟುಗಳು ಆನ್‌ಲೈನ್ ಮೂಲಕ ನೋಂದಾವಣೆ ಮಾಡಿದ ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳೊಂದಿಗೆ ನಿಗದಿತ ದಿನಾಂಕದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿಯ ದೂರವಾಣಿ ಸಂಖ್ಯೆ: 0820-2521324 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
Next Story




