ಜ.28ರಂದು ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿಸಿ ಆ್ಯಂಡ್ ಪಿಎನ್‌ಡಿಟಿ ಹಾಗೂ ತಾಯಿ ಆರೋಗ್ಯ ಕಾರ್ಯಕ್ರಮ ಉಡುಪಿ ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಮಣಿಪಾಲ ಮಾಹೆ ಇವರ ಸಹಯೋಗದಲ್ಲಿ ಜಿಲ್ಲೆಯ ಸರಕಾರಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿಗಳಿಗೆ ಪೋಕ್ಸೋ ಕಾಯಿದೆ ಕುರಿತು ಕಾರ್ಯಾಗಾರವೊಂದು ಜ.28ರಂದು ಬೆಳಗ್ಗೆ 9.30ಕ್ಕೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿ ಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ.ನಾಗರತ್ನ ಶಾಸ್ತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಪಿಸಿಪಿಎನ್‌ಡಿಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್ ಕೆ ಮತ್ತಿತರರು ಭಾಗವಹಿಸಲಿದ್ದಾರೆ.
ಜಿಲ್ಲಾ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ, ಕೆ.ಎಂ.ಸಿ ಮಣಿಪಾಲದ ಪ್ರಸೂತಿ ತಜ್ಞೆ ಡಾ. ರಾಜೇಶ್ವರಿ ಹಾಗೂ ಕೆ.ಎಂ.ಸಿ ಮಣಿಪಾಲದ ಫೋರೆನ್ಸಿಕ್ ತಜ್ಞೆ ಡಾ. ಅಪರ್ಣ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







