ಫೆ.28ಕ್ಕೆ ‘ಸೇವಾ ಭೂಷಣ’ ಪ್ರಶಸ್ತಿ ಪ್ರದಾನ

ಉಡುಪಿ, ಫೆ.25: ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುತ್ತಿರುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ ಆಯ್ಕೆಯಾ ಗಿರುವ ಬಳಕೆದಾರರ ವೇದಿಕೆಯ ಸಂಚಾರಕರಾದ ಎ.ಪಿ.ಕೊಡಂಚರಿಗೆ ಇದೇ ಫೆ.28ರ ಶುಕ್ರವಾರ ಸಂಜೆ 5 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮೂಡಬಿದ್ರೆಯ ಆಳ್ವಾಸ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಎಂ. ಮೋಹನ್ ಆಳ್ವ ಪ್ರಶಸ್ತಿ ಪ್ರದಾನ ಮಾಡಲಿದ್ದು, ಬಳಕೆದಾರರ ವೇದಿಕೆಯ ವಿಶ್ವಸ್ಥರಾದ ಎನ್. ರಾಮ ಭಟ್ ಅಭಿನಂದನಾ ಮಾತುಗಳನ್ನು ಆಡಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





