ಅ.28: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ಉಡುಪಿಗೆ ಭೇಟಿ

ಉಡುಪಿ, ಅ.27: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹ್ಮದ್ ಅವರು ಅ.28ರ ಬುದವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ ಬೆಳಗ್ಗೆ 11:00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಅಪರಾಹ್ನ 3:00 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಕುಂದುಕೊರತೆ ವಿಚಾರಣೆ ನಡೆಸಲಿದ್ದಾರೆ. ಸಂಜೆ 4:15ಕ್ಕೆ ಅಲ್ಪಸಂಖ್ಯಾತರು ಅಧಿಕ ಸಂಖ್ಯೆಯಲ್ಲಿ ವಾಸಿಸುವ ಹಿಂದುಳಿದ ಪ್ರದೇಶ ಗಳಲ್ಲಿರುವ ಅಂಗನವಾಡಿ ಮತ್ತು ಶಾಲೆಗಳಿಗೆ ಭೇಟಿ ನೀಡಿದ ಬಳಿಕ ಮಂಗಳೂರಿಗೆ ತೆರಳಲಿದ್ದಾರೆ.
Next Story




