ಅ.29ರಂದು ಉಡುಪಿ ಬ್ಲಾಕ್ ಕಾಂಗ್ರೆಸ್ನಿಂದ ರಕ್ತದಾನ ಶಿಬಿರ

ಉಡುಪಿ, ಅ.27: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಅ.29ರಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಡಾ.ಆರತಿಕೃಷ್ಣ ಉದ್ಘಾಟಿಸಲಿರುವರು. ಈ ಸಂದರ್ಭದಲ್ಲಿ ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರ ಕಿಟ್ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story




