ಅ.29ರಂದು ಪದವಿ ಪೂರ್ವ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26

ಉಡುಪಿ, ಅ.28: ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಜಂಟಿ ಆಶ್ರಯದಲ್ಲಿ ಎರಡು ದಿನಗಳ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26 ಅ.29ರಂದು ಬೆಳಗ್ಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಶಾಸಕ ಯಶಪಾಲ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಲ್ಕರ್ ಅವರು ಕ್ರೀಡಾಕೂಟವನ್ನು ಉದ್ಘಾಟಿಸ ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಸಿಇಓ ಪ್ರತೀಕ್ ಬಾಯಲ್, ಎಸ್ಪಿ ಹರಿರಾಂ ಶಂಕರ್ ಭಾಗವಹಿಸಲಿದ್ದಾರೆ.
ಕ್ರೀಡಾಕೂಟದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭ ಅ.30ರ ಗುರುವಾರ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.





