ಆ.3ರಂದು ದಸಂಸ ನವಚೇತನ ಸಮಾವೇಶ
ಕಾಪು, ಜು.29: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಕಾಪು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಪ್ರಯುಕ್ತ ನವಚೇತನ ಸಮಾವೇಶ ವನ್ನು ಆ.3ರಂದು ಬೆಳಗ್ಗೆ 10ಗಂಟೆಗೆ ಕಾಪು ಪೊಲಿಪು ಕಾಂಚನಂ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ವಹಿಸಲಿರುವರು. ನೂತನ ಪದಾಧಿಕಾರಿಗಳ ಪ್ರಮಾಣ ವಚನವನ್ನು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮ್‌ರಾಜ್ ಬಿರ್ತಿ ನೆರವೇರಿಸಲಿರುವರು. ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





