Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.3ರಂದು ಉಡುಪಿ ಜಿಲ್ಲಾಸ್ಪತ್ರೆ ಕುರಿತು...

ನ.3ರಂದು ಉಡುಪಿ ಜಿಲ್ಲಾಸ್ಪತ್ರೆ ಕುರಿತು ಬೆಂಗಳೂರಿನಲ್ಲಿ ನಿರ್ಧಾರ: ಸಚಿವ ರಿಝ್ವಾನ್ ಅರ್ಷದ್

ವಾರ್ತಾಭಾರತಿವಾರ್ತಾಭಾರತಿ1 Nov 2026 9:10 PM IST
share
ನ.3ರಂದು ಉಡುಪಿ ಜಿಲ್ಲಾಸ್ಪತ್ರೆ ಕುರಿತು ಬೆಂಗಳೂರಿನಲ್ಲಿ ನಿರ್ಧಾರ: ಸಚಿವ ರಿಝ್ವಾನ್ ಅರ್ಷದ್

ಉಡುಪಿ, ನ.1: ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ, ಇನ್ನೂ ಉದ್ಘಾಟನೆಗೊಳ್ಳದ ಹಾಗೂ ಅಲ್ಲಿಗೆ ಹಳೆ ಉಪಕರಣ, ಸಲಕರಣೆಗಳನ್ನು ವರ್ಗಾಯಿಸುತ್ತಿರುವ ಕುರಿತಂತೆ ಉಂಟಾಗಿರುವ ವಿವಾದದ ಕುರಿತಂತೆ ನ. 3ರಂದು ಬೆಂಗಳೂರಿನಲ್ಲಿ ಸಂಬಂಧಿತರೆಲ್ಲರ ಸಭೆ ಕರೆದಿದ್ದು, ಅದರಲ್ಲಿ ಆಸ್ಪತ್ರೆಗೆ ಸಂಬಂಧಿಸಿದಂತೆ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ತಿಳಿಸಿದ್ದಾರೆ.

ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ನೂತನ ಜಿಲ್ಲಾಸ್ಪತ್ರೆಯ ಉದ್ಘಾಟನೆಗೆ ಮೀನಮೇಷ ಎಣಿಸುತ್ತಿರುವ ಕುರಿತಂತೆ ವಿವಿಧ ಸಂಘಟನೆಗಳು ಹಾಗೂ ಶಾಸಕರು ಹೇಳಿಕೆಗಳ ಕುರಿತು ಸಚಿವರ ಗಮನ ಸೆಳೆದಾಗ, ಎಲ್ಲಾ ವಿಷಯಗಳನ್ನು ನ.3ರ ಸಭೆಯಲ್ಲಿ ಅಂತಿಮ ಗೊಳಿಸಲಾಗುವುದು. ಇದಕ್ಕಾಗಿ ಈಗಾಗಲೇ ಆರೋಗ್ಯ ಸಚಿವರ ಸಮಯ ಕೋರಿದ್ದು, ಸಭೆಯಲ್ಲಿ ಜಿಲ್ಲಾಧಿಕಾರಿ ಗಳು, ಜನಪ್ರತಿನಿಧಿಗಳು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.ಆರೋಗ್ಯ ಸಚಿವರು ಕರಾವಳಿಯವರೇ ಆಗಿರುವುದರಿಂದ ಅವರಿಗೆ ಸಮಸ್ಯೆಯ ಅರಿವಿದೆ ಎಂದು ಅವರು ವಿವರಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಮಾನದಂಡ: ಉಡುಪಿ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ನೀಡುತ್ತಾ ಬಂದಿರುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ರದ್ದುಪಡಿಸಿರುವ ಕಾರಣ ಕೇಳಿದಾಗ, ರಾಜ್ಯದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ವಿಚಾರದಲ್ಲಿ ಇಡೀ ರಾಜ್ಯಕ್ಕೆ ಅನ್ವಯವಾಗುವಂತಹ ಏಕರೂಪದ ನೀತಿ ರೂಪಿಸಬೇಕಿದೆ. ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಬಗ್ಗೆ ಚರ್ಚೆ ನಡೆಸುತ್ತಿದೆ. ರಾಜ್ಯಾದ್ಯಂತ ಪ್ರಶಸ್ತಿ ನೀಡುವ ವ್ಯವಸ್ಥೆ ಹೇಗಿರಬೇಕು ಎಂಬುದರ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ವರ್ಷವೇ ಪ್ರಶಸ್ತಿ ಆಯ್ಕೆಗೆ ಮಾನದಂಡಗಳನ್ನು ರೂಪಿಸಿ, ಇದಕ್ಕಾಗಿ ಸಮಿತಿಯೊಂದನ್ನು ರಚಿಸುವ ಯೋಜ ನೆಯೂ ಇದೆ. ರಾಜಕೀಯ ಅಥವಾ ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಮಣಿದು ಪ್ರಶಸ್ತಿ ಆಯ್ಕೆ ನಡೆಯಬಾ ರದು. ಪ್ರಶಸ್ತಿಗೆ ತನ್ನದೇ ಆದ ಗೌರವ ಮತ್ತು ಘನತೆ ಇರಬೇಕು. ಈ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದರು.

ಜಿಲ್ಲೆಯ ಹಿರಿಯ ವೈದ್ಯ ಡಾ.ಚಂದ್ರಶೇಖರ್ ಅವರಿಗೆ ಪ್ರಶಸ್ತಿ ಘೋಷಿಸಿ, ಹಿಂದಕ್ಕೆ ಪಡೆದಿರುವುದು ಜಿಲ್ಲೆಗಾದ ಅವಮಾನ ಅಲ್ವಾ ಎಂದು ಪ್ರಶ್ನಿಸಿದಾಗ, ಘೋಷಿಸಿದ ಮೂವರಿಗೂ ಪ್ರಶಸ್ತಿ ನೀಡಿದ್ದರೆ ನಮಗೆ ಸಂತೋಷವಾ ಗುತ್ತಿತ್ತು. ಆದರೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಇಲ್ಲಿಗೆ ಬಂದಮೇಲೆ ವಿಷಯ ನನ್ನ ಗಮನಕ್ಕೆ ಬಂದಿದೆ. ಸಚಿವ ತಂಗಡಗಿ ಬಳಿ ಮಾತನಾಡುತ್ತೇನೆ ಎಂದರು.

ರಾಜ್ಯದಲ್ಲಿ ಇಂದಿನಿಂದ ಹೆಚ್ಚಿಸಿರುವ ನಂದಿನಿ ಹಾಲಿನ ದರ ಏರಿಕೆ ಕುರಿತು ಕೇಳಿ ಬರುತ್ತಿರುವ ವಿರೋಧ ಕುರಿತ ಪ್ರಶ್ನೆಗೆ ಉತ್ತರಿಸಿದ ರಿಝ್ವಾನ್, ರೈತರ ಬೇಡಿಕೆ ಮತ್ತು ಅವರ ಬದುಕಿನ ಬಗ್ಗೆ ಗಮನಹರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕ ದಲ್ಲಿ ಈಗಲೂ ಲೀಟರ್ ಹಾಲಿನ ಬೆಲೆ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಮಾಡದಿದ್ದರೆ ರೈತರು ಹಾಲನ್ನು ನೀಡದೇ ಹೊರರಾಜ್ಯಕ್ಕೆ ಮಾರುವ ಪರಿಸ್ಥಿತಿ ಇತ್ತು. ಇದರಿಂದ ಇಲ್ಲಿ ಹಾಲಿನ ಕೊರತೆ ಉಂಟಾಗುತ್ತಿತ್ತು. ರೈತರಿಗೆ ಉತ್ತಮ ಬೆಲೆ ನೀಡಬೇಕಾದ ಅಗತ್ಯತೆಯ ವಿಚಾರವನ್ನು ಪರಿಗಣಿಸಿ ದರ ನಿಗದಿ ಪಡಿಸಲಾಗಿದೆ. ಆದರೆ ಈಗಲೂ ರಾಜ್ಯ ದಲ್ಲೇ ಹಾಲಿನ ದರ ಕಡಿಮೆ ಇದೆ ಎಂದು ಮತ್ತೊಮ್ಮೆ ನುಡಿದರು.

ಖಜಾನೆ ಕುರಿತು ಸಿಎಂ ಮಾತಾಡಿಲ್ಲ: ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ನೀಡಿರುವ ಹೇಳಿಕೆಯ ಕುರಿತ ಪ್ರಶ್ನೆಯನ್ನು ಅರ್ಧದಲ್ಲೇ ತಡೆದು ಪ್ರತಿಕ್ರಿಯಿಸಿದ ರಿಝ್ವಾನ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆ ರೀತಿಯ ಹೇಳಿಕೆಯನ್ನು ಎಲ್ಲೂ ನೀಡಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಕ್ರಿಯಿಸೋಲ್ಲ ಎಂದರು.

ಹೊಸದಿಲ್ಲಿಯಲ್ಲಿ ಇಂದು ನಡೆದ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರೆ ಸರಕಾರ ಗಳು ಬರುತ್ತವೆ, ಹೋಗುತ್ತವೆ. ಆದರೆ ಜನರು ತಮ್ಮ ಪ್ರತಿನಿಧಿ ಗಳನ್ನು ಆಯ್ಕೆ ಮಾಡುವ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಮತ್ತು ವ್ಯವಸ್ಥೆ ಉಳಿಯುವುದು ಮುಖ್ಯ. ಈ ದಿಶೆಯಲ್ಲಿ ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು. ಆಡಳಿತ ಪಕ್ಷದ ಸಹಭಾಗಿಯಂತೆ ಅಥವಾ ಮೈತ್ರಿಕೂಟದ ಪಾಲುದಾರನಂತೆ ವರ್ತಿಸುವ ಪರಿಸ್ಥಿತಿ ಉಂಟಾದರೆ ಅದರ ವಿರುದ್ಧ ಧ್ವನಿ ಎತ್ತುವುದು ಎಲ್ಲರ ಕರ್ತವ್ಯ ಎಂದರು.

ಚುನಾವಣಾ ಆಯೋಗ ಜಾರಿಗೆ ತಂದಿರುವ ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶವೇ ಜನರನ್ನು ಮತದಾರರ ಪಟ್ಟಿ ಯಿಂದ ಹೊರಗಿಡುವುದಾಗಿದೆ ಎಂಬುದು ನಮ್ಮ ಆರೋಪ. ಈ ವಿಚಾರದಲ್ಲಿ ನಮ್ಮ ಹೋರಾಟ ಮುಂದು ವರಿಯ ಲಿದೆ ಎಂದು ರಾಜ್ಯದಲ್ಲೂ 99 ಲಕ್ಷ ಮತದಾರರ ಹೆಸರು ತೆಗೆಯಲಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದರು.

‘ಬಾಲಿವುಡ್ ನಟರು ಕೋಮುವಾದಿಗಳು’

ನಿನ್ನೆಯ ತಮ್ಮ ಸಿನಿಮಾ ನಟರು ಕೋಮುವಾದಿಗಳಾಗಿದ್ದಾರೆ ಎಂಬ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಸಚಿವ ರಿಝ್ವಾನ್ ಅರ್ಷದ್, ತಾನು ಬಾಲಿವುಡ್ ನಟರ ಬಗ್ಗೆ ಮಾತನಾಡಿದ್ದೇನೆಯೇ ಹೊರತು ಕರ್ನಾಟಕದ ಕನ್ನಡ ನಟರ ಬಗ್ಗೆ ಅಲ್ಲ ಎಂದರು. ರಾಜ್ಯದ ನಟರು ಕೋಮುವಾದಿಗಳಲ್ಲ. ಆದರೆ ಬಾಲಿವುಡ್‌ನ ಹಲವು ನಟರು ಕೋಮುವಾದಿ ಮನಸ್ಥಿತಿ ಹೊಂದಿರುವುದಲ್ಲದೇ, ಇಂಥ ವಿಷಯಗಳು ವಿಜೃಂಭಿಸುವ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಕುರಿತು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X