Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.31ರವರೆಗೆ ಹೆಚ್‌ಪಿವಿ ಲಸಿಕಾ ಅಭಿಯಾನ ...

ಡಿ.31ರವರೆಗೆ ಹೆಚ್‌ಪಿವಿ ಲಸಿಕಾ ಅಭಿಯಾನ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ5 Sept 2026 9:53 PM IST
share
ಡಿ.31ರವರೆಗೆ ಹೆಚ್‌ಪಿವಿ ಲಸಿಕಾ ಅಭಿಯಾನ  ವಿಸ್ತರಣೆ

ಉಡುಪಿ, ಸೆ.5: ಹೆಚ್‌ಪಿವಿ ಲಸಿಕಾ ಅಭಿಯಾನವನ್ನು ಕಳೆದ ಫೆಬ್ರವರಿ 28ರಂದು ಪ್ರಾರಂಭಿಸಲಾಗಿದ್ದು, ಸುಮಾರು 1.2 ಕೋಟಿ 14 ವಷರ್ ವಯಸ್ಸಿನ ಬಾಲಕಿಯರಿಗೆ (14ನೇ ಹುಟ್ಟುಹಬ್ಬ ಆಚರಿಸಿ 15ನೇ ಹುಟ್ಟುಹಬ್ಬ ಆಚರಿಸದ ಬಾಲಕಿಯರು) ಲಸಿಕೆ ನೀಡುವುದು ಇದರ ಉದ್ದೇಶವಾಗಿದೆ. ಈಗಾಗಲೇ ಸುಮಾರು 159 ದೇಶಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತಿದೆ. ಇದೀಗ ಕೇಂದ್ರ ಸರಕಾರವು ಈ ಲಸಿಕಾ ಅಭಿಯಾನವನ್ನು ಮುಂದಿನ ಡಿ.31ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.

ಗರ್ಭಕಂಠದ ಕ್ಯಾನ್ಸರ್ ಎಂದರೆ ಗರ್ಭಾಶಯದ ಕೆಳಭಾಗದಲ್ಲಿರುವ ಗರ್ಭಕಂಠದಲ್ಲಿ ಉಂಟಾಗುವ ಕ್ಯಾನ್ಸರ್. ಗರ್ಭಕಂಠದ ಕ್ಯಾನ್ಸರ್‌ನ ಸುಮಾರು ಶೇ.99.7ರಷ್ಟು ಪ್ರಕರಣಗಳು ಹ್ಯೂಮನ್ ಪ್ಯಾಪಿಲೋಮಾ ವೈರಸ್ ಸೋಂಕಿಗೆ ಸಂಬಂಧಿಸಿವೆ.

ಭಾರತದಲ್ಲಿ ಮಹಿಳೆಯರಲ್ಲಿ ಕಂಡುಬರುವ ಸಾಮಾನ್ಯ ಕ್ಯಾನ್ಸರ್‌ಗಳಲ್ಲಿ ಸ್ತನ ಕ್ಯಾನ್ಸರ್ ಪ್ರಥಮ ಸ್ಥಾನದಲ್ಲಿದ್ದು, ಗರ್ಭಕಂಠದ ಕ್ಯಾನ್ಸರ್ ದ್ವಿತೀಯ ಸ್ಥಾನದಲ್ಲಿದೆ. ಹೆಚ್‌ಪಿವಿ ಲೈಂಗಿಕವಾಗಿ ಹರಡುವ ಸೋಂಕಿಗೆ ಕಾರಣವಾಗುವ ಸಾಮಾನ್ಯವಾಗಿ ಕಂಡುಬರುವ ವೈರಸ್ ಆಗಿದ್ದು, ನಿಕಟ ದೈಹಿಕ ಸಂಪರ್ಕದ ಮೂಲಕ ಹರಡುತ್ತದೆ.

ಲಸಿಕಾ ಅಭಿಯಾನದ ಪ್ರಮುಖ ಉದ್ದೇಶ ಗರ್ಭಕಂಠದ ಕ್ಯಾನ್ಸರ್‌ನ್ನು ತಡೆಗಟ್ಟುವುದಾಗಿದೆ. ಸಮಯೋಚಿತವಾಗಿ ಲಸಿಕೆ ಪಡೆಯುವುದರ ಜೊತೆಗೆ ನಿಯಮಿತವಾಗಿ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳುವುದರಿಂದ ಗರ್ಭಕಂಠದ ಕ್ಯಾನ್ಸರ್‌ನ ಅಪಾಯವನ್ನು ಕಡಿಮೆ ಮಾಡಬಹುದು. ಹೆಚ್‌ಪಿವಿ ಲಸಿಕೆಯನ್ನು ಲೈಂಗಿಕವಾಗಿ ಸಕ್ರಿಯರಾಗುವ ಮೊದಲು ನೀಡಿದಾಗ ಉತ್ತಮ ರಕ್ಷಣೆಯನ್ನು ಒದಗಿಸುತ್ತದೆ.

ಈ ಲಸಿಕೆಯನ್ನು ಭಾರತ ಸರಕಾರದ ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ, 14 ವಷರ್ ವಯಸ್ಸಿನ ಅಂದರೆ 14ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇನ್ನೂ 15ನೇ ಹುಟ್ಟುಹಬ್ಬವನ್ನು ಆಚರಿಸದಿರುವ ಬಾಲಕಿಯರಿಗೆ ನೀಡಲು ಕ್ರಮವಹಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಯ ಪೂರೈಕೆ ಸೀಮಿತವಾಗಿ ರುವುದರಿಂದ, ಭಾರತವು ಪ್ರಾರಂಭಿಕ ಹಂತದಲ್ಲಿ 14 ವರ್ಷದ ಬಾಲಕಿಯರ ಮೇಲೆ ಗಮನ ಕೇಂದ್ರೀಕರಿಸಿದೆ. 15 ವರ್ಷ ವಯಸ್ಸಿನ ಗರಿಷ್ಠ ಅರ್ಹತಾ ಮಿತಿಯನ್ನು ತಲುಪುವ ಮೊದಲು ಅವರಿಗೆ ಲಸಿಕೆ ಪಡೆಯುವ ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ.

ಇದು ಏಕ ಡೋಸ್ ಲಸಿಕೆಯಾಗಿದ್ದು, ಎಡ ಮೇಲ್ಭುಜಕ್ಕೆ ಇಂಟ್ರಾಮಸ್ಕ್ಯುಲರ್ ರೀತಿಯಲ್ಲಿ ನೀಡಲಾಗುತ್ತದೆ. ಅಧ್ಯಯನಗಳ ಪ್ರಕಾರ ಈ ಲಸಿಕೆ ಸುರಕ್ಷಿತವಾಗಿದ್ದು, ಆರೋಗ್ಯಕ್ಕೆ ಯಾವುದೇ ಹಾನಿಕಾರಕ ಪರಿಣಾಮಗಳನ್ನು ಉಂಟುಮಾಡುವುದಿಲ್ಲ.

ಉಡುಪಿ ಜಿಲ್ಲೆಯಲ್ಲಿ 8,325 ಮಕ್ಕಳಿಗೆ ಈಗಾಗಲೇ ಲಸಿಕೆಯನ್ನು ನೀಡಲಾಗಿದ್ದು ಇದುವರೆಗೂ ಲಸಿಕೆ ಪಡೆದ ಯಾವುದೇ ಮಕ್ಕಳಲ್ಲಿ ಅಡ್ದ ಪರಿಣಾಮಗಳು ಉಂಟಾಗಿರುವ ಮಾಹಿತಿ ಬಂದಿಲ್ಲ. ಜಿಲ್ಲೆಯಲ್ಲಿ ಸಾಕಷ್ಟು ಲಸಿಕೆ ಲಭ್ಯತೆ ಇದ್ದು, ಸರಕಾರಿ ಆರೋಗ್ಯ ಸಂಸ್ಥೆಯಲ್ಲಿ (ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ) ಲಸಿಕೆಯನ್ನು ನೀಡಲಾಗುತ್ತಿದೆ.

ಮೇ 31ರವರೆಗೆ ನಡೆಯಲಿದ್ದ ಅಭಿಯಾನವನ್ನು ಲಸಿಕೆ ಪಡೆಯದೇ ಉಳಿದ ಅರ್ಹ ಫಲಾನುಭವಿಗಳಿಗೆ ನೀಡಲು ಹೆಚ್ಚುವರಿಯಾಗಿ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿತ್ತು. ಪ್ರಸುತ್ತ ಭಾರತ ಸರ್ಕಾರವು ಅಭಿಯಾನವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.

ಆದ್ದರಿಂದ 14ನೇ ಹುಟ್ಟುಹಬ್ಬ ಆಚರಿಸಿರುವ 15 ವರ್ಷ ತುಂಬದ (05-09-2011ರಿಂದ 31-12-2012) ಬಾಲಕಿಯರು ತಮ್ಮ ಪೋಷಕ ರೊಂದಿಗೆ ಹತ್ತಿರದ ಸರಕಾರಿ ಆರೋಗ್ಯ ಸಂಸ್ಥೆಯಲ್ಲಿ (ಸಿಸಿಪಿ) ಹೆಚ್‌ಪಿವಿ ಲಸಿಕೆಯನ್ನು ಪಡೆಯುವ ಮೂಲಕ ಅಭಿಯಾನದ ಸದುಪಯೋಗ ಪಡೆದು ಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X