3.19 ಲಕ್ಷ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಉಡುಪಿ, ಜ.29: ಆನ್‌ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಲಕ್ಷಾಂತರ ರೂ. ಹಣವನ್ನು ಹಿಂತಿರುಗಿಸದೆ ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕಿನ್ನಿಮುಲ್ಕಿಯ ಜಾರ್ಜ್ ರಫಾಯಲ್ ಮಚಾದೋ(65) ಎಂಬವರು ಆನ್‌ಲೈನ್ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿ, ಡಿ.20ರಿಂದ ಜ.25ರ ಮಧ್ಯಾವಧಿ ಯಲ್ಲಿ ಅಪರಿಚಿತರು ತಿಳಿದ ವಿವಿಧ ಬ್ಯಾಂಕಿನ ಖಾತೆಗಳಿಗೆ ಆನ್ ಲೈನ್ ಮೂಲಕ ಒಟ್ಟು 3,19,460ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಈ ಹಣವನ್ನು ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲಾಗಿದೆ.
Next Story





