Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 36.29 ಲಕ್ಷ ರೂ. ಮೌಲ್ಯದ 73.92 ಕೆಜಿ...

36.29 ಲಕ್ಷ ರೂ. ಮೌಲ್ಯದ 73.92 ಕೆಜಿ ಮಾದಕ ವಸ್ತುಗಳು ನಾಶ

ವಾರ್ತಾಭಾರತಿವಾರ್ತಾಭಾರತಿ27 Jun 2026 9:01 PM IST
share
36.29 ಲಕ್ಷ ರೂ. ಮೌಲ್ಯದ 73.92 ಕೆಜಿ ಮಾದಕ ವಸ್ತುಗಳು ನಾಶ

ಪಡುಬಿದ್ರಿ : ಉಡುಪಿ ಜಿಲ್ಲೆಯ ನಾನಾ ಪೋಲಿಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ಶುಕ್ರವಾರ ಪಡುಬಿದ್ರಿ ಠಾಣಾ ವ್ಯಾಪ್ತಿಯ ನಂದಿಕೂರು ಕೈಗಾರಿಕಾ ಪ್ರಾಂಗಣದಲ್ಲಿ ವೈಜ್ಞಾನಿಕವಾಗಿ ನಾಶಪಡಿಸಲಾಯಿತು.

ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ನ್ಯಾಯಾಲಯದ ಆದೇಶದಂತೆ ಅಂದಾಜು 36,29,550 ರೂ. ಮೊತ್ತದ 73 ಕೆಜಿ 92 ಗ್ರಾಂ 828 ಮಿಲಿಗ್ರಾಂ ತೂಕದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.

ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಅಧ್ಯಕ್ಷ ಹರಿರಾಮ್ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯ್ಕ್, ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮಿಟಿಯ ಸದಸ್ಯರಾದ ಕಾರ್ಕಳ ಡಿವೈಎಸ್ಪಿ ಎಸ್.ವಿಜಯಪ್ರಸಾದ್ ಮತ್ತು ಉಡುಪಿ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ನೇತೃತ್ವದಲ್ಲಿ ಸೂಕ್ತ ಪರಿಶೀಲನೆ ಬಳಿಕ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.

ಮಲ್ಪೆ ಠಾಣೆಯ ಒಂದೇ ಪ್ರಕರಣದಲ್ಲಿ 32,53,050ರೂ. ಮೌಲ್ಯದ 64.731 ಕೆಜಿ ಗಾಂಜಾ ಸಹಿತ ಮಣಿಪಾಲ ಠಾಣೆಯ 10 ಪ್ರಕರಣ, ಶಿರ್ವ ಠಾಣೆಯ 2 ಪ್ರಕರಣ, ಕೋಟ, ಕಾಪು, ಉಡುಪಿ ನಗರ, ಸೆನ್ ಅಪರಾಧ ಠಾಣೆಗಳ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣಗಳಲ್ಲಿ ಮಾದಕ ದ್ರವ್ಯ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ, ಪಡುಬಿದ್ರಿ ಠಾಣಾಧಿಕಾರಿ ಸಕ್ತಿವೇಲು, ಕಾಪು ಠಾಣಾಧಿಕಾರಿ ತೇಜಸ್ವಿ, ಉಡುಪಿ ಡಿಸಿಆಬಿರ್ ಉಪನಿರೀಕ್ಷಕ ಗೋಪಾಲ ನಾಯ್ಕ್, ನಾನಾ ಠಾಣೆಗಳ ಪೊಲೀಸರು, ಸೋಕೋ ಸಿಬ್ಬಂದಿಗಳು, ಆಯುಷ್ ಎನ್ವಿರೋಟೆಕ್ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

‘ಸಾರ್ವಜನಿಕರು ಪೋಲಿಸ್ ಇಲಾಖೆಯೊಂದಿಗೆ ಕೈಜೋಡಿಸಿ ಯುವ ಜನಾಂಗ ಮಾದಕ ವ್ಯಸನರಾಗುವುದನ್ನು ತಪ್ಪಿಸಲು ಸಹಕರಿಸಬೇಕು. ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ. ಈಗಾಗಲೆ ಎಲ್ಲರಿಗೂ ಕ್ಯೂಆರ್ ಕೋಡ್ ಹಂಚಲಾಗಿದೆ. ಸಾರ್ವಜನಿಕರು ಅದಕ್ಕೆ ಮಾಹಿತಿ ನೀಡಬೇಕು. ಸಾರ್ವಜನಿಕರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು’

-ಹರಿರಾಂ ಶಂಕರ್, ಉಡುಪಿ ಎಸ್ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X