Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.4: ತುಳುಕೂಟ ಉಡುಪಿಯಿಂದ ವಿಶೇಷ...

ಅ.4: ತುಳುಕೂಟ ಉಡುಪಿಯಿಂದ ವಿಶೇಷ ಕಾರ್ಯಕ್ರಮ ತುಳು ಭಾಷಾ ಮಾನ್ಯತೆ ಸಂಭ್ರಮಕ್ಕೆ ‘ತುಳುವೆರೆ ದಿಬ್ಬಣ’

ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ28 Sept 2026 8:59 PM IST
share
ಅ.4: ತುಳುಕೂಟ ಉಡುಪಿಯಿಂದ ವಿಶೇಷ ಕಾರ್ಯಕ್ರಮ ತುಳು ಭಾಷಾ ಮಾನ್ಯತೆ ಸಂಭ್ರಮಕ್ಕೆ ‘ತುಳುವೆರೆ ದಿಬ್ಬಣ’

ಉಡುಪಿ, ಸೆ.28: ತುಳು ಭಾಷೆಗೆ ಕರ್ನಾಟಕ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ತುಳುಕೂಟ ಉಡುಪಿ ವತಿಯಿಂದ ಅ.4ರಂದು ಉಡುಪಿಯಲ್ಲಿ ‘ತುಳುವೆರೆ ದಿಬ್ಬಣ’ ಹಾಗೂ ಗೌಜಿ-ಮಿನದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತುಳುಕೂಟ ಉಡುಪಿ ಗುರಿಕಾರೆ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಅ.4ರ ರವಿವಾರ ಸಂಜೆ 4:00 ಗಂಟೆಗೆ ಕುಂಜಿಬೆಟ್ಟು ರಿಕ್ಷಾ ನಿಲ್ದಾಣದಿಂದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದವರೆಗೆ ತುಳುಕೂಟದ ಸದಸ್ಯರು ಹಾಗೂ ವಿವಿಧ ತುಳು ಸಂಘಟನೆಗಳ ಸಹಯೋಗದೊಂದಿಗೆ ‘ತುಳುವೆರೆ ದಿಬ್ಬಣ’ ನಡೆಯಲಿದೆ. ಬಳಿಕ ಸಂಜೆ 4 ಗಂಟೆಗೆ ಐವೈಸಿ ಸಭಾಂಗಣದಲ್ಲಿ ತುಳು ಭಾಷಾ ಮಾನ್ಯತೆ ಸಂಭ್ರಮ ಹಾಗೂ ವಿಶ್ವಪ್ರಭಾ ಪ್ರಯೋಜಿತ ಎಸ್. ಯು. ಪಣಿಯಾಡಿ ನೆನಪಿನ ತುಳು ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ತುಳು ಭಾಷೆಗೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಉಡುಪಿ ತುಳುಕೂಟ ಈ ವಿಶೇಷ ಕಾರ್ಯಕ್ರಮದ ಮೂಲಕ ತುಳುವರ ಸಂಭ್ರಮ ವನ್ನು ವ್ಯಕ್ತಪಡಿಸಲಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ಪ್ರಕ್ರಿಯೆಯಲ್ಲಿ ಹೋರಾಟ ನಡೆಸಿದ ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಎ.ಸಿ. ಭಂಡಾರಿಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ ಸೊರಕೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಕೆ. ರಘುಪತಿ ಭಟ್ ಹಾಗೂ ಉದ್ಯಮಿ ಪ್ರಸಾದ್‌ರಾಜ್ ಕಾಂಚನ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಇದರೊಂದಿಗೆ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ತುಳು ವಿಷಯದಲ್ಲಿ ಶೇ.100 ಅಂಕ ಪಡೆದ ಸಾಧನೆ ಮಾಡಿದ 52 ಮಂದಿ ವಿದ್ಯಾರ್ಥಿಗಳನ್ನು ನಗದು ಬಹುಮಾನ ಸಹಿತ ಸನ್ಮಾನಿಸಲಾಗುವುದು ಎಂದೂ ಅವರು ವಿವರಿಸಿದರು.

ಪಣಿಯಾಡಿ ಪ್ರಶಸ್ತಿ ಪ್ರದಾನ: ತುಳುಕೂಟ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಪ್ರಭಾ ಪ್ರಾಯೋಜಿತ 31ನೇ ವರ್ಷದ ತುಳು ಚಳುವಳಿಯ ನೇತಾರ ದಿ. ಎಸ್. ಯು.ಪಣಿಯಾಡಿ ನೆನಪಿನ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭವೂ ಬಿ.ಜಯಕರ ಶೆಟ್ಟಿ ಇಂದ್ರಾಳಿ ಅವರ ಅಧ್ಯಕ್ಷತೆಯಲ್ಲಿ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ.

ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷ ಬರೋಡಾ ಶಶಿಧರ ಶೆಟ್ಟಿ, ತುಳು ಸಂಘ ಬರೋಡಾದ ಗೌರವಾಧ್ಯಕ್ಷ ದಯಾನಂದ ಬೋಂಟ್ರ, ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಎಂ.ಎಲ್. ಸಾಮಗ, ಸಮಾಜ ಸೇವಕ ಹಾಗೂ ಪಣಿಯಾಡಿ ಕಾದಂಬರಿ ಪ್ರಶಸ್ತಿಯ ಪ್ರಾಯೋಜಕ ಉಡುಪಿ ವಿಶ್ವನಾಥ ಶೆಣೈ, ಯುವ ಉದ್ಯಮಿ ಸುಭಾಷ್ ಸಾಲ್ಯಾನ್ ನೆಲ್ಲಿಕಟ್ಟಿ ಭಾಗವಹಿಸಲಿದ್ದಾರೆ.

2025ನೇ ಸಾಲಿನ ಪಣಿಯಾಡಿ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾದ ‘ದಧೂಟಿ ಬನ’ ಕಾದಂಬರಿಯ ಲೇಖಕಿ ಪುತ್ತೂರಿನ ಉಪತಹಶೀಲ್ದಾರ್ ಸುಲೋಚನಾ ಪಿ.ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. 10ಸಾವಿರ ನಗದು ಸಮೇತ ಪ್ರಶಸ್ತಿ ಪತ್ರ ನೀಡಲಾಗುವುದು. ಕೃತಿ ಪರಿಚಯ ವನ್ನು ಸಾಹಿತಿ ವಾಸಂತಿ ಅಂಬಪಾಡಿ ಮಾಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ತುಳುಕೂಟದ ಉಪಾಧ್ಯಕ್ಷ ಭುವನಪ್ರಸಾದ್ ಹೆಗ್ಡೆ, ಡಾ.ವಿ.ಕೆ.ಯಾದವ್, ಕಾರ್ಯದರ್ಶಿ ಗಂಗಾಧರ ಕಿದಿಯೂರು, ಪಣಿಯಾಡಿ ಪ್ರಶಸ್ತಿ ಸಂಚಾಲಕ ಪ್ರಕಾಶ್ ಸುವರ್ಣ ಕಟಪಾಡಿ, ತುಳುವೆರೆ ದಿಬ್ಬಣ ಸಂಚಾಲಕ ದಿವಾಕರ ಸನಿಲ್, ಮಾಧ್ಯಮ ಸಂಚಾಲಕಿ ಯಶೋಧ ಕೇಶವ್, ನಾಟಕ ಪರ್ಬ ಸಂಚಾಲಕ ಬಿ. ಪ್ರಭಾಕರ ಭಂಡಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X