Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೆ.4, 5: ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ,...

ಸೆ.4, 5: ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ, ವಿಟ್ಲಪಿಂಡಿ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ25 Aug 2026 9:51 PM IST
share
ಸೆ.4, 5: ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ, ವಿಟ್ಲಪಿಂಡಿ ಸಂಭ್ರಮ

ಉಡುಪಿ : ಪರ್ಯಾಯ ಶಿರೂರು ಮಠದ ಆಶ್ರಯದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಈ ಬಾರಿಯ ‘ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ ಆ.29ರಿಂದ ಸೆ.6ರವರೆಗೆ ನಡೆಯಲಿದೆ. ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ.5ರಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ ವಿಟ್ಲಪಿಂಡಿಯ ಸಂಭ್ರಮ ಆಚರಿಸಲಾಗುತ್ತದೆ ಎಂದು ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರು ತಿಳಿಸಿದ್ದಾರೆ.

ಉಡುಪಿ ರಥಬೀದಿಯ ಶಿರೂರು ಮಠದಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸೆ.4ರಂದು ಮಧ್ಯರಾತ್ರಿ 12:12ಕ್ಕೆ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಸೆ.5ರಂದು ಬೆಳಗ್ಗೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಅಪರಾಹ್ನ 3:30ಕ್ಕೆ ಚಿನ್ನದ ರಥದಲ್ಲಿ ಶ್ರೀಕೃಷ್ಣನ ಮೃಣ್ಮಯ ವಿಗ್ರಹದ ಮೆರವಣಿಗೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ವೈಭವದ ವಿಟ್ಲಪಿಂಡಿ ಸಂಭ್ರಮ ವಿರುತ್ತದೆ ಎಂದರು.

ಮಲ್ಲಯುದ್ಧ ವಿಶೇಷ: ಶಿರೂರು ಮಠದ ದಿವಾನರಾದ ಡಾ.ಉದಯ್ ಸರಳತ್ತಾಯ ಮಾತನಾಡಿ, ವಿಟ್ಲಪಿಂಡಿ ಉತ್ಸವದ ಅಂಗವಾಗಿ ಈ ಬಾರಿ ಮಲ್ಲಯುದ್ಧದ ಪ್ರದರ್ಶನ ಹಾಗೂ ಸ್ಪರ್ಧೆ ಮೊದಲ ಬಾರಿ ನಡೆಯಲಿದ್ದು, ಇದರೊಂದಿಗೆ ಎರಡು ದಿನಗಳ ಕಾಲ ವಿಶೇಷವಾಗಿ ಹುಲಿವೇಷ ಸ್ಪರ್ಧೆಯನ್ನು ನಡೆಸಲಾಗುತ್ತದೆ ಎಂದರು.

ರಾಜಾಂಗಣದಲ್ಲಿ ಸೆ.4ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಹಾಗೂ ಸೆ.5ರಂದು ಸಂಜೆ 5ರಿಂದ ಹುಲಿ ವೇಷ ಹಾಗೂ ಜಾನಪದ ನೃತ್ಯ ಸ್ಪರ್ಧೆ ನಡೆಯಲಿದೆ. ವಿಜೇತ ತಂಡಕ್ಕೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಸೆ.6ರಂದು ಬೆಳಗ್ಗೆ ಕೋಟಿ ತುಳಸಿ ಅರ್ಚನೆ, ಸಾಯಂಕಾಲ 5 ಗಂಟೆಗೆ ರಾಜಾಂಗಣದಲ್ಲಿ ಅಷ್ಟಮಿ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಸರಳತ್ತಾಯ ತಿಳಿಸಿದರು.

ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಮಲ್ಲಯುದ್ಧದ ಪ್ರದರ್ಶನ ಸೆ.5ರಂದು ಅಪರಾಹ್ನ ರಥಬೀದಿಯ ವಿಶೇಷ ವೇದಿಕೆಯಲ್ಲಿ ನಡೆಯಲಿದೆ. ಮೈಸೂರು, ಮಂಡ್ಯ, ಮಂಗಳೂರುಗಳಿಂದ ಆಹ್ವಾನಿತ ಮಲ್ಲಯುದ್ಧ ಪ್ರವೀಣರಿಂದ ಸಂಪ್ರದಾಯ ಬದ್ಧವಾಗಿ ಮಲ್ಲಯುದ್ಧ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.

ಪರ್ಯಾಯ ಶಿರೂರು ಮಠದ ವತಿಯಿಂದ ಈವರೆಗೆ ಕೋಟ್ಯಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಶಿರೂರು ಮಠದಿಂದ ಭಕ್ತಾದಿಗಳ ಅನುಕೂಲಕ್ಕಾಗಿ ಹಾಗೂ ಮೂಲಸೌಕರ್ಯಗಳ ಆಧುನೀಕರಣಕ್ಕಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾ ಗಿದ್ದು, ಜನವರಿಯಿಂದ ಈವರೆಗೆ ಒಟ್ಟು 4 ಕೋಟಿ ರೂ. ಅಧಿಕ ವೆಚ್ಚ ಮಾಡಲಾಗಿದೆ ಎಂದು ಉದಯ್ ಸರಳತ್ತಾಯ ತಿಳಿಸಿದರು.

ಭಕ್ತಾದಿಗಳಿಗೆ ದೇವರ ಸುಗಮ ದರ್ಶನಕ್ಕಾಗಿ 50.40 ಲಕ್ಷ ರೂ. ವೆಚ್ಚದಲ್ಲಿ ಹೊಸ ಕ್ಯೂ ವ್ಯವಸ್ಥೆ ರೂಪಿಸಲಾಗಿದೆ. 65 ಲಕ್ಷ ವೆಚ್ಚದಲ್ಲಿ ಬಯೋಗ್ಯಾಸ್ ವ್ಯವಸ್ಥೆ, 75.42 ಲಕ್ಷ ರೂ. ವೆಚ್ಚದಲ್ಲಿ ನೂತನ ಶೌಚಾಲಯ ಹಾಗೂ ನಿರ್ಮಿಸ ಲಾಗಿದೆ. ಬ್ರಹ್ಮರಥಕ್ಕೆ 15 ಲಕ್ಷ ರೂ. ವೆಚ್ಚದಲ್ಲಿ ಹೊಸ ಚಕ್ರಗಳನ್ನು ಅಳವಡಿಸಲಾಗಿದೆ. ಮಠದ ಸುರಕ್ಷತೆಯನ್ನು ಹೆಚ್ಚಿಸಲು 20.30 ಲಕ್ಷ ರೂ. ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಗೂ 24.74 ಲಕ್ಷ ರೂ. ವೆಚ್ಚದಲ್ಲಿ ವಿದ್ಯುದ್ದೀಕರಣ ವ್ಯವಸ್ಥೆ ಮಾಡಲಾಗಿದೆ. ಅನ್ನದಾನ ಸೇವೆಯನ್ನು ಸುಗಮಗೊಳಿಸಲು ಆಧುನಿಕ ಬಾಯ್ಲರ್, ಇತರ ಯಂತ್ರಗಳನ್ನು ಅಳವಡಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಠದ ಮ್ಯಾನೇಜರ್ ವಾಸುದೇವ ಆಚಾರ್ಯ, ರಾಮಮೂರ್ತಿ ಭಟ್, ಕಾರ್ತಿಕ್ ಭಟ್ ಉಪಸ್ಥಿತರಿದ್ದರು.

ದೇಶಕ್ಕೆ ಗಂಡಾಂತರದ ಸೂಚನೆ

ಶ್ರೀಕೃಷ್ಣ ಮಠದ ಕುರಿತಂತೆ ನಡೆಸಲಾದ ಅಷ್ಟಮಂಗಲ ಪ್ರಶ್ನೆಯ ಸಂದರ್ಭದಲ್ಲಿ ಮುಂಬರುವ ತಿಂಗಳಲ್ಲಿ ದೇಶ ದೊಡ್ಡ ಗಂಡಾಂತರಗಳ ಮೂಲಕ ಹಾದುಹೋಗುವ ಸೂಚನೆ ದೊರಕಿದೆ ಎಂದು ಶಿರೂರುಶ್ರೀಗಳು ಹಾಗೂ ಮಠದ ದಿವಾನರು ತಿಳಿಸಿದರು.

ದೇಶಕ್ಕೆ ಕಾಳಸರ್ಪ ಯೋಗ ಸಂಕಷ್ಟ ಇರುವುದು ಅಷ್ಟಮಂಗಲ ಪ್ರಶ್ನೆಯ ಸಂದರ್ಭದಲ್ಲಿ ಗೊತ್ತಾಗಿದೆ. ಡಿಸೆಂಬರ್ ಒಳಗೆ ಇದರ ಪರಿಣಾಮ ಗೋಚರಿಸುತ್ತದೆ. ಇದರ ಪರಿಣಾಮವನ್ನು ಕಡಿಮೆ ಮಾಡಲು ಶ್ರೀಕೃಷ್ಣ ಮಠದಲ್ಲಿ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲು ಅವಕಾಶವಿದೆ ಎಂದೂ ಅದರಲ್ಲಿ ಹೇಳಲಾಗಿದೆ ಎಂದೂ ಶ್ರೀವೇದವರ್ಧನ ತೀರ್ಥರು ತಿಳಿಸಿದರು. ಶ್ರೀಕೃಷ್ಣ ಮಠದ ಸಂಕಷ್ಟದ ಪರಿಹಾರಕ್ಕೂ ನಾವು ಸೆ.6ರಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X