Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.5: ಉಡುಪಿ ಜಿಲ್ಲೆಯ ಕೃಷಿಕರ ಸಮಸ್ಯೆಗಳ...

ನ.5: ಉಡುಪಿ ಜಿಲ್ಲೆಯ ಕೃಷಿಕರ ಸಮಸ್ಯೆಗಳ ಕುರಿತಂತೆ ವಿಚಾರಸಂಕಿರಣ

ವಾರ್ತಾಭಾರತಿವಾರ್ತಾಭಾರತಿ3 Nov 2026 9:35 PM IST
share
ನ.5: ಉಡುಪಿ ಜಿಲ್ಲೆಯ ಕೃಷಿಕರ ಸಮಸ್ಯೆಗಳ ಕುರಿತಂತೆ ವಿಚಾರಸಂಕಿರಣ

ಉಡುಪಿ, ನ.3: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲಾ ಕೃಷಿಕ ಸಮಾಜ ಹಾಗೂ ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಕರಾವಳಿಯಲ್ಲಿ ರೈತರ ಭೂಮಿಗೆ ಸಂಬಂಧಿ ಸಿದ ಶಾಸನಬದ್ಧ ಹಕ್ಕುಗಳಾದ ಕುಮ್ಕಿ ಹಕ್ಕು, ಗೇರು ಲೀಸ್ ಭೂಮಿ, ಕಸ್ತೂರಿ ರಂಗನ್ ವರದಿ ಮತ್ತು ಕಾಡುಪ್ರಾಣಿ ಹಾವಳಿ ಸಮಸ್ಯೆಗಳ ಕುರಿತು ನವೆಂಬರ್ 5ರಂದು ಉಡುಪಿಯಲ್ಲಿ ವಿಚಾರ ಸಂಕಿರಣವೊಂದನ್ನು ಆಯೋಜಿಸ ಲಾಗಿದೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಅಶೋಕ್‌ಕುಮಾರ್ ಕೊಡ್ಗಿ ಹೇಳಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ.5ರ ಗುರುವಾರ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಈ ವಿಚಾರಸಂಕಿರಣವನ್ನು ಆಯೋಜಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳ ಸಂಸದರು ಹಾಗೂ ಶಾಸಕರು ಇದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಒಂದು ದಿನದ ಈ ವಿಚಾರಸಂಕಿರಣದಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ರೈತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಹಾಗೂ ಹಕ್ಕುಗಳ ಕುರಿತು ಚರ್ಚಿಸಿ ಸರಕಾರದ ಗಮನ ಸೆಳೆಯಬೇಕು ಎಂದು ವಿನಂತಿಸಿದರು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕರ್ನಾಟಕ ವಿಧಾನಸಭೆಯ ಉಪಸಭಾಧ್ಯಕ್ಷ ಮಂಕಾಳ ಎಸ್. ವೈದ್ಯ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹಾಗೂ ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಲಿ ಭಾಗವಹಿಸಲಿ ದ್ದಾರೆ ಎಂದರು.

ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿ ಸಿರುವ ಕಸ್ತೂರಿ ರಂಗನ್ ವರದಿಯ ಶಿಫಾರಸುಗಳಿಂದ ಕರಾವಳಿ ಭಾಗದ ಕೃಷಿಕರು ಹಾಗೂ ಸ್ಥಳೀಯ ಜನ ಜೀವನದ ಮೇಲೆ ಪರಿಣಾಮ ಬೀರಿದೆ, ಪಶ್ಚಿಮ ಘಟ್ಟ ಪ್ರದೇಶದ ಭೌತಿಕ ಪರಿಶೀಲನೆ ನಡೆಸದೆ, ಕೃಷಿ ಭೂಮಿ ಗಳನ್ನೂ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸಿರುವುದರಿಂದ ರೈತರು ತಲೆತಲಾಂತರಗಳಿಂದ ಅನುಭವಿಸಿ ಕೊಂಡು ಬಂದಿರುವ ಭೂಮಿಯ ಹಕ್ಕುಗಳಿಗೆ ಧಕ್ಕೆಯಾಗುವ ಆತಂಕವಿದೆ. ಆದ್ದರಿಂದ ಖಾಸಗಿ ಕೃಷಿ ಭೂಮಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಿಂದ ಹೊರಗಿಡಬೇಕು ಹಾಗೂ ಹಿಂದಿನ ಅಧಿಸೂಚನೆಗಳ ಮರುಪರಿಶೀಲಿಸಿ ಹೊಸ ಅಧಿಸೂಚನೆ ಹೊರಡಿಸಬೇಕು ಎಂದು ಕೃಷಿಕ ಸಮಾಜದ ರಾಜ್ಯ ನಿರ್ದೇಶಕ ಪ್ರದೀಪ್ ಹೆಬ್ಬಾರ್ ನಂಚಾರ್ ಒತ್ತಾಯಿಸಿದರು.

ಕುಮ್ಕಿ ಭೂಮಿಯ ಖಾತೆ ಮಾಡಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ರೈತರು ಸ್ವಾತಂತ್ರ್ಯಪೂರ್ವದಿಂದಲೇ ಕೃಷಿ ಭೂಮಿ ಉಳ್ಳವರು ಅದಕ್ಕೆ ತಾಗಿಕೊಂಡಿರುವ ಸರಕಾರಿ ಭೂಮಿಗಳಲ್ಲಿ ತಮ್ಮ ಖಾಸಗಿ ಭೂ ಗಡಿಯಿಂದ 100 ಗಜದವರೆಗಿನ ಭೂಮಿಯಲ್ಲಿ ಕೃಷಿಗೆ ಅನುಕೂಲವಾಗುವಂತೆ ಸೊಪ್ಪು ದರಲೆ ಪಡೆಯಲು ಕುಮ್ಕಿ ಭೂಮಿ ಪಡೆದಿದ್ದು, ಅದನ್ನು ಈಗ ಆಯಾ ಕೃಷಿಕರಿಗೆ ಖಾತಾ ಮಾಡಿ ನೀಡುವಂತೆ ಕೇಳಿಕೊಳ್ಳುತಿದ್ದೇವೆ ಎಂದರು.

ಅದೇ ರೀತಿ 1958-59ನೇ ಅವಧಿಯಲ್ಲಿ ಗೇರು ಕೃಷಿಗೆ ಉತ್ತೇಜನ ನೀಡಲು ಸರಕಾರಿ ಬಂಜರು ಭೂಮಿಯನ್ನು 30 ವರ್ಷಗಳ ಅವಧಿಗೆ ಗೇರು ಕೃಷಿ ಮಾಡಲು ಲೀಸ್‌ಗೆ ನೀಡಿದ್ದು, ಅದೀಗ ಅವಧಿ ಮುಗಿದಿದ್ದು ಆ ಭೂಮಿಯ ಮಾಲಕ ತ್ವವನ್ನು ಆಯಾ ರೈತರಿಗೆ ಮಾರುಕಟ್ಟೆ ದರಕ್ಕೆ ನೀಡುವಂತೆ ಒತ್ತಾಯಿಸುತ್ತಿದ್ದವೆ ಎಂದು ಹೆಬ್ಬಾರ್ ತಿಳಿಸಿದರು.

ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಂಘದ ಉಪಾಧ್ಯಕ್ಷ, ಕೃಷಿಕ ವಿಠಲ್ ಶೆಟ್ಟಿ ಶೇಡಿಕೊಡ್ಲು ಮಾತನಾಡಿ, ಕರಾವಳಿಯಲ್ಲಿ ಕಾಡು ಪ್ರಾಣಿಗಳ ಉಪಟಳದಿಂದ ಕೃಷಿಗೆ ನಿರಂತರವಾಗಿ ಹಾನಿಯಾಗುತ್ತಿದೆ, ಹೀಗಾಗಿ ಕೃಷಿಕರು ಕೃಷಿ ಮಾಡುವುದನ್ನೇ ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿಕ ಬೆಳೆದ ಬೆಳೆಗಳೆಲ್ಲಾ ಕಾಡುಹಂದಿ, ಜಿಂಕೆ, ನವಿಲು, ಮಂಗಲ ಕಾಡುಕೋಣಗಳ ಪಾಲಾಗುತ್ತಿದ್ದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ . ಕಾಡುಪ್ರಾಣಿಗಳ ಉಪಟಳದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಕೃಷಿ ಸಂಘಟನೆಗಳ ಪ್ರಮುಖರಾದ ಡಾ. ಅತುಲ್ ಕುಮಾರ್ ಶೆಟ್ಟಿ ಚಿತ್ತೂರು, ಉಪೇಂದ್ರ ನಾಯಕ್, ವೈಕುಂಠ ಹೇರ್ಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X