ನ.5ರಂದು ವೋಟ್ ಚೋರಿ-ದೇಶ್ ಬಚಾವೋ ಜನಾಂದೋಲನ

ಉಡುಪಿ, ನ.4: ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗಾಗಿ ಎಐಸಿಸಿ ಮತ್ತು ಕೆಪಿಸಿಸಿ ಸೂಚನೆಯಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ಮತ್ತು ಜಾಥವನ್ನು ನ.5ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಎಐಸಿಸಿ ಜಿಲ್ಲಾ ಉಸ್ತುವಾರಿ ಕಮಲೇಶ್ವರ್ ಪಟೇಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕೆಪಿಸಿಸಿ ಉಸ್ತುವಾರಿ ವೆಂಕಟೇಶ್ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




