Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೀಘ್ರವೇ ಉಡುಪಿ ಜಿಲ್ಲೆಯ 50 ಕಡೆ ದೃಷ್ಟಿ...

ಶೀಘ್ರವೇ ಉಡುಪಿ ಜಿಲ್ಲೆಯ 50 ಕಡೆ ದೃಷ್ಟಿ ಯೋಜನೆ ಜಾರಿ: ಎಸ್ಪಿ ಹರಿರಾಮ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ19 Aug 2025 7:38 PM IST
share
ಶೀಘ್ರವೇ ಉಡುಪಿ ಜಿಲ್ಲೆಯ 50 ಕಡೆ ದೃಷ್ಟಿ ಯೋಜನೆ ಜಾರಿ: ಎಸ್ಪಿ ಹರಿರಾಮ್ ಶಂಕರ್

ಕುಂದಾಪುರ, ಆ.19: ಮನೆ ಮನೆಗೆ ಪೊಲೀಸ್ ಯೋಜನೆ ಸ್ವರೂಪ ದಲ್ಲಿಯೇ ‘ದೃಷ್ಟಿ ಯೋಜನೆ’ಯನ್ನು ಪ್ರಾರಂಭಿ ಸಲಾಗಿದ್ದು, ಪೊಲೀಸ್ ಇಲಾಖೆಯ ಮೇಲುಸ್ತುವಾರಿಯಲ್ಲಿ, ಖಾಸಗಿ ಭದ್ರತಾ ವ್ಯವಸ್ಥೆಯಡಿ ಅಪರಾಧ ಚಟುವಟಿಕೆ ಗಳ ಕಣ್ಗಾವಲು ಮಾಡುವ ವಿನೂತನ ವ್ಯವಸ್ಥೆ ಇದಾಗಿದೆ ಶೀಘ್ರದಲ್ಲೇ ಜಿಲ್ಲೆಯ 50 ಕಡೆಗಳಲ್ಲಿ ದೃಷ್ಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹೇಳಿದ್ದಾರೆ.

ಕುಂದಾಪುರ ಕೋಡಿಯ ಬ್ಯಾರಿಸ್ ಕಾಲೇಜಿನಲ್ಲಿ ಕುಂದಾಪುರ ಪೊಲೀಸ್ ಉಪವಿಭಾಗದ ಆಶ್ರಯದಲ್ಲಿ ಸೋಮವಾರ ಸಂಜೆ ‘ದೃಷ್ಟಿ ಯೋಜನೆ’ಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮನೆ, ಅಂಗಡಿ ಹಾಗೂ ಸಾರ್ವಜನಿಕ ರಕ್ಷಣೆಗೆ ನೆರವಾಗಲು ದೃಷ್ಟಿ ಯೋಜನೆ ಆರಂಭಿಸಿದ್ದು, ಖಾಸಗಿ ಭದ್ರತಾ ವ್ಯವಸ್ಥೆಗಾಗಿ ಮಾಸಿಕ 100-150 ರೂ. ದೇಣಿಗೆಯಡಿಯಲ್ಲಿ ಸುರಕ್ಷತೆ ಖಾತ್ರಿಪಡಿಸಿಕೊಳ್ಳಬಹುದು. ಪ್ರತಿ 2 ಗಂಟೆಗಳಿಗೊಮ್ಮೆ, ಠಾಣೆಯಿಂದ ದೂರವಾಣಿ ಕರೆ ಮಾಡಿ, ಚಲನವಲನಗಳ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಅನುಮಾನಾಸ್ಪದ ಚಟುವಟಿಕೆಗಳು ಇಲಾಖೆಯ ಗಮನಕ್ಕೆ ಬಂದ ತಕ್ಷಣ ಕ್ರಮ ಕೈಗೊಳ್ಳಲು ಇದು ಸಹಕಾರಿ ಯಾಗಿದೆ ಎಂದರು.

ಜಿಲ್ಲಾ ಗೃಹರಕ್ಷಕ ದಳ ಜಿಲ್ಲಾ ಸೆಕೆಂಡ್ ಇನ್ ಕಮಾಂಡೆಂಟ್ ರಾಜೇಶ್ ಕೆ.ಸಿ. ಮಾತನಾಡಿ, ಶೂನ್ಯ ಅಪರಾಧ ಜಿಲ್ಲೆಯಾಗಲು ಎಲ್ಲರ ಪ್ರಯತ್ನ ಅಗತ್ಯ. ದೃಷ್ಟಿ ಯೋಜನೆ ಹಾಗೂ ಸಿಸಿಟಿವಿ ಮಾನಿಟರಿಂಗ್ ವ್ಯವಸ್ಥೆಯ ಒಳಿತನ್ನು ಗುರುತಿಸಿ ಬೆಂಬಲಿಸಬೇಕು ಎಂದು ತಿಳಿಸಿದರು.

ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಮಾತನಾಡಿ, ಜಿಲ್ಲೆಯಲ್ಲಿ 13 ಕಡೆ ಈಗಾಗಲೇ ದೃಷ್ಟಿ ಯೋಜನೆ ಅನುಷ್ಠಾನಕ್ಕೆ ಬಂದಿದೆ. ಅಪರಾಧ, ಅಪಘಾತ ಹಾಗೂ ಶಾಲಾ ಕಾಲೇಜು ಮಕ್ಕಳ ಡ್ರಗ್ಸ್ ಹಾವಳಿ ತಡೆಗೂ ಈ ಯೋಜನೆ ಉಪಯೋಗವಾಗಲಿದೆ ಎಂದು ಹೇಳಿದರು.

ಯಂಗ್ ಮುಸ್ಲಿಂ ಅಸೋಸಿಯೇಶನ್ ಪದಾಧಿಕಾರಿ ಮುನಾಫ್ ಕೋಡಿ ಹಾಗೂ ತಾಲ್ಲೂಕು ಬೋರ್ಡ್ ಮಾಜಿ ಸದಸ್ಯ ಅಬ್ದುಲ್ ಕೋಡಿ ಮಾತನಾಡಿದರು. ಬ್ಯಾರೀಸ್ ಸಮೂಹ ಸಂಸ್ಥೆಯ ಆಡಳಿತ ಟ್ರಸ್ಟಿ ಅಶ್ರಫ್ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.

ಕೋಡಿ ಬ್ಯಾರಿಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರಹಿಮಾನ್ ಕೋಡಿ, ಪುರಸಭೆ ಸದಸ್ಯರಾದ ಅಶ್ಪಕ್ ಕೋಡಿ, ಕಮಲ ಮಂಜುನಾಥ್, ಲಕ್ಷ್ಮೀ ಬಾಯಿ, ಕೋಡಿ ಶ್ರೀಚಕ್ರಮ್ಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗೋಪಾಲ ಪೂಜಾರಿ, ಕೋಡಿ ಮುಹಿಯುದೀನ್ ಜುಮಾ ಮಸೀದಿ ಅಧ್ಯಕ್ಷ ಜುಲ್ಫಿಕರ್, ಬಿಲಾಲ್ ಮಸೀದಿ ಅಧ್ಯಕ್ಷ ಮಹಮದ್ ಅಲಿ, ಹೈಗುಳಿ ದೇವಸ್ಥಾನ ಅಧ್ಯಕ್ಷ ವೆಂಕಟೇಶ ಬಿಲ್ಲವ, ಕಿಲೆರಿಯಾ ಜುಮಾ ಮಸೀದಿ ಅಧ್ಯಕ್ಷ ಎಂ.ಎಸ್.ಫಾರೂಕ್ ಉಪಸ್ಥಿತರಿದ್ದರು.

ದೃಷ್ಟಿ ಯೋಜನೆಯಲ್ಲಿ ಸೇವೆ ಸಲ್ಲಿಸುವ ಹಸೈನಾರ್ ಕೋಡಿ ಅವರಿಗೆ ಧ್ವಜ ಹಸ್ತಾಂತರ ಮಾಡಲಾಯಿತು. ವೃತ್ತ ನಿರೀಕ್ಷಕ ಸಿ.ಪಿ.ಜಯರಾಮ ಗೌಡ ಸ್ವಾಗತಿಸಿದರು. ಕುಂದಾಪುರ ಠಾಣೆಯ ಎಸ್ಸೈ ನಂಜಾನಾಯ್ಕ್ ವಂದಿಸಿದರು, ಸಿಬ್ಬಂದಿ ಮಧುಸೂದನ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X