ಜೂ.6ರಂದು ನೇರ ಸಂದರ್ಶನ

ಉಡುಪಿ, ಜೂ.3: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್ ಮೋಟಾರ್ಸ್ ಇಲ್ಲಿ ಜೂನ್ 6ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಪಿಯುಸಿ, ಐಟಿಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




