ಅ.6ರಂದು ʼಸಂಘಟನ್ ಸೃಜನ ಅಭಿಯಾನ-2ʼ ಚರ್ಚಾ ಸಭೆ

ಉಡುಪಿ, ಅ.4: ಸಂಘಟನ್ ಸೃಜನ ಅಭಿಯಾನ-2ರ ಸಂಘಟನಾ ಪ್ರಕ್ರಿಯೆ, ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಕಾರ್ಯ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸುವ ನಿಟ್ಟಿನಲ್ಲಿ ಅ.6ರಂದು ಮಧ್ಯಾಹ್ನ 3ಗಂಟೆಗೆ ಬ್ರಹ್ಮಗಿರಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ಕರೆಯಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಉಡುಪಿ ಜಿಲ್ಲೆಗೆ ಸಂಘಟನ್ ಸೃಜನ ಅಭಿಯಾನ-2ಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆಯ ವೀಕ್ಷಕರಾಗಿ ನಿಯೋಜಿಸಲ್ಪಟ್ಟಿರುವ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಂಗಳೂರು ಕಾರ್ಪೊರೇಟರ್ ಅಬ್ದುಲ್ ರವೂಫ್, ಶಲೇಟ್ ಪಿಂಟೋ, ಮಾರ್ಗದರ್ಶನದಲ್ಲಿ ನಡೆಯುವ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಹಾಗೂ ಸುಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಷಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




