ಫೆ.7ರಂದು ಜನತಾ ದರ್ಶನ
ಉಡುಪಿ: ಬ್ರಹ್ಮಾವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಫೆ.7ರಂದು ಬೆಳಗ್ಗೆ 10:30ಕ್ಕೆ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿರುವ ನಾರಾಯಣ ಗುರು ಸಭಾಭವನದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ತಮ್ಮ ಅಹವಾಲು ಹಾಗೂ ಅರ್ಜಿಗಳನ್ನು ಸಲ್ಲಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story





