Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.7ರಿಂದ ಕೈಮಗ್ಗ ಬಟ್ಟೆಗಳ ಪ್ರದರ್ಶನ...

ಮಾ.7ರಿಂದ ಕೈಮಗ್ಗ ಬಟ್ಟೆಗಳ ಪ್ರದರ್ಶನ -ಮಾರಾಟ ಮೇಳ

ವಾರ್ತಾಭಾರತಿವಾರ್ತಾಭಾರತಿ3 March 2025 6:25 PM IST
share
ಮಾ.7ರಿಂದ ಕೈಮಗ್ಗ ಬಟ್ಟೆಗಳ ಪ್ರದರ್ಶನ -ಮಾರಾಟ ಮೇಳ

ಉಡುಪಿ, ಮಾ.3: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ವತಿಯಿಂದ ಕೈಮಗ್ಗ ಬಟ್ಟೆಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಾ.7ರಿಂದ 9 ರವರೆಗೆ ಬೆಳಗ್ಗೆ 10ರಿಂದ ರಾತ್ರಿ 8:30ರವರೆಗೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಮಾ.7ರಂದು ಮಧ್ಯಾಹ್ನ 12:30ಕ್ಕೆ ಉಡುಪಿಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥರು ಮೇಳವನ್ನು ಉದ್ಘಾಟಿಸಲಿರುವರು. ಕಾಲೇಜಿನ ಪ್ರಾಂಶು ಪಾಲ ಲಕ್ಷ್ಮೀನಾರಾಯಣ ಕಾರಂತ್ ಭಾಗವಹಿಸಲಿರುವರು. ಚರಕದ ಅಧ್ಯಕ್ಷೆ ಮಹಾಲಕ್ಷ್ಮೀ ಅಧ್ಯಕ್ಷತೆ ವಹಿಸಲಿರುವರು ಎಂದು ಸಂಸ್ಥೆಯ ಮಾರುಕಟ್ಟೆ ಮತ್ತು ವಿನ್ಯಾಸ ವಿಭಾಗ ವ್ಯವಸ್ಥಾಪಕಿ ಪದ್ಮಶ್ರೀ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

ಮೇಳದಲ್ಲಿ 10 ಮಳಿಗೆಗಳು ಇರಲಿದ್ದು, ಚರಕದ ನೈಸರ್ಗಿಕ ಬಣ್ಣದ ಕೈ ಮಗ್ಗದ ಬಟ್ಟೆಗಳು, ಸಿದ್ಧ ಉಡುಪುಗಳು, ಅಖಿಲ ಭಾರತ ಕೈಮಗ್ಗ ಸಂಘಟನೆಗಳ ಒಕ್ಕೂಟದ ಉತ್ತರ ಕರ್ನಾಟಕ ಭಾಗದ ಅಪರೂಪದ ಸೀರೆಗಳಾದ ಗಾಡಿ ದಡಿ, ಗೋಮಿ ದಡಿ, ಚುಕ್ಕಿ ಪರಸ್, ತೊಡೆ ಪರಸ್, ಕಿನ್ನಾಳ ಸೀರೆಗಳು, ಟವೆಲ್ಸ್, ಬೆಡ್ಶೀಟ್ಗಳು, ನೇಕಾರರೇ ನೇಯ್ದ ಬೆಂಗಳೂರಿನ ವಿಶುದ್ದಿಯ ರೇಷ್ಮೆ ಸೀರೆಗಳು, ಟೆರಾಬಾನ್ ಅವರ ಕರಕುಶಲ ಟೆರಾಕೋಟಾ ಮತ್ತು ಮೆಟಲ್ ಆಭರಣಗಳು, ಶಿರಸಿಯ ಚೇತನಾ ಸಂಸ್ಥೆಯ ಬಾಳೆನಾರಿನ ಉತ್ಪನ್ನಗಳು ಮರಳಿ ಮಣ್ಣಿಗೆ ಯವರ ಮಡಿಕೆ-ಕುಡಿಕೆಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯದಿಂದ ತಯಾರಿಸಿದ ವೈವಿಧ್ಯಮಯ ಆಹಾರ ಉತ್ಪನ್ನಗಳು, ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಸೌಂದರ್ಯವರ್ಧಕಗಳು, ಕಾರ್ಕಳದ ತಪಸ್ ಫುಡ್ಸ್ ಮಖಾನ ಉತ್ಪನ್ನಗಳು, ಪುಸ್ತಕ ಮಳಿಗೆಗಳೂ ಇರಲಿವೆ ಎಂದರು.

ಚರಕ ಗ್ರಾಮೀಣ ಮಹಿಳೆಯರ ಸಹಕಾರ ಸಂಘವಾಗಿದ್ದು, ನೈಸರ್ಗಿಕ ಕೈಮಗ್ಗ ಬಟ್ಟೆ ಹಾಗೂ ಸಿದ್ಧವಸ್ತುಗಳ ಉತ್ಪಾದನೆ ಮತ್ತು ಮಾರಾಟಗಳಲ್ಲಿ ಕಳೆದ 29 ವರ್ಷಗಳಿಂದ ತೊಡಗಿಕೊಂಡಿದ್ದೇವೆ. ಪ್ರಸ್ತುತ ಸ್ಥಳೀಯವಾಗಿ ಸುಮಾರು 350 ಜನ ಹಾಗೂ ರಾಜ್ಯದ ಬೇರೆ, ಬೇರೆ ಜಿಲ್ಲೆಗಳ 400 ಜನ ನೇಕಾರರಿಗೆ, ಒಟ್ಟು 750 ಜನರಿಗೆ ಉದ್ಯೋಗ ನೀಡಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸಿಇಓ ಪೀಟರ್, ಅಧ್ಯಕ್ಷೆ ಮಹಾಲಕ್ಷ್ಮೀ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X