ನ.7ರಂದು ಉಡುಪಿಯಲ್ಲಿ ಸಾಲಿಡಾರಿಟಿ ಸಮಾವೇಶ; ಹಾಡುಗಾರ ಡಾ.ಹೈದರ್ ಸೈಫಿರಿಂದ ಗಾಯನ ಕಾರ್ಯಕ್ರಮ

ಹೈದರ್ ಸೈಫಿ
ಉಡುಪಿ : ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿ ಬಲಿಷ್ಠಗೊಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಭರವಸೆ ಮತ್ತು ಪ್ರತಿರೋಧದ ಧ್ವನಿ- ಸಾಲಿಡಾರಿಟಿ ಸಮಾವೇಶವನ್ನು ನ.7ರಂದು ಸಂಜೆ 4:30ಕ್ಕೆ ಉಡುಪಿಯ ಪುರಭವನದಲ್ಲಿ ಆಯೋಜಿಸಲಾಗಿದೆ.
ಸಮಾವೇಶದಲ್ಲಿ ದೆಹಲಿಯ ಮಾನವ ಹಕ್ಕು ಹೋರಾಟಗಾರ ಹಾಗೂ ಎಪಿಸಿಆರ್ ರಾಷ್ಟ್ರೀಯ ಕಾರ್ಯದರ್ಶಿ ನದೀಮ್ ಖಾನ್, ಜಮಾಅತೆ ಇಸ್ಲಾಮಿ ಹಿಂದ್ನ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞ ಮತ್ತು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಹಾಡುಗಾರ ಡಾ.ಹೈದರ್ ಸೈಫಿ ಅವರಿಂದ ವಿಶೇಷ ಗಾಯನ ಕಾರ್ಯಕ್ರಮ ನಡೆಯಲಿದೆ. ಸಮಾವೇಶದಲ್ಲಿ ದೇಶದ ಪ್ರಸ್ತುತ ಆಗುಹೋಗುಗಳನ್ನು ಮತ್ತು ರಾಜಕೀಯ-ಸಾಮಾಜಿಕ ಪರಿಸ್ಥಿತಿಗಳನ್ನು ಮುನ್ನೆಲೆಗೆ ತಂದು ಪ್ರತಿಭಟನಾ ಘೋಷಣೆಗಳೊಂದಿಗೆ ಮಹತ್ವದ ನಿರ್ಣಯಗಳನ್ನು ಮಂಡಿಸಲಾಗುವುದು ಎಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷ ಅಫ್ವಾನ್ ಬಿ.ಹೂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




