7,000 ವಿದ್ಯಾರ್ಥಿಗಳಿಗೆ 40 ಲಕ್ಷ ರೂ. ಮೌಲ್ಯದ ಶಾಲಾ ಕಿಟ್ ವಿತರಣೆ

ಪಡುಬಿದ್ರೆ, ಸೆ.13: ಅದಾನಿ ಸಮೂಹದ ಸಿಎಸ್‌ಆರ್ ಭಾಗವಾದ ಅದಾನಿ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲೆಯ 85 ಸರಕಾರಿ ಹಾಗೂ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ 7,000 ವಿದ್ಯಾರ್ಥಿಗಳಿಗೆ 40 ಲಕ್ಷ ರೂ. ಮೌಲ್ಯದ ಶಾಲಾ ಕಿಟ್/ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಪುಸ್ತಕ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ಅಧ್ಯಕ್ಷ ಕಿಶೋರ್ ಆಳ್ವ, ಕಳೆದ ಒಂದು ದಶಕಕ್ಕೂ ಹೆಚ್ಚಿನ ಅವಧಿುಂದ ಮುಂದುವರಿಸಿಕೊಂದು ಬರುತ್ತಿರುವ ಈ ಕಾರ್ಯ ಕ್ರಮವು ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ಬಲವಾದ ಅಡಿಪಾಯ ನಿರ್ಮಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಶಿಕ್ಷಣವು ಅದಾನಿ ೌಂಡೇಶನ್‌ನ ಪ್ರಮುಖ ಸಿಎಸ್‌ಆರ್ ಆದ್ಯತೆಗಳಲ್ಲಿ ಒಂದಾಗಿದ್ದು, ಪ್ರತೀ ವಾರ್ಷಿಕ ಸಾಲಿನ ಸಿಎಸ್‌ಆರ್ ಬಜೆಟ್‌ನ ಸುಮಾರು ಶೇ.20ರಷ್ಟು ಮೊತ್ತವನ್ನು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮೀಸಲಿಡಲಾಗುತ್ತಿದೆ ಎಂದು ಆಳ್ವ ತಿಳಿಸಿದರು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಒದಗಿಸುವುದು ಮಹತ್ವದ ನೆರವಾಗಿದ್ದು, ಇದು ಪೋಷಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದರ ಜೊತೆಗೆ ಮಕ್ಕಳಲ್ಲಿ ಶಿಕ್ಷಣ ಬಗ್ಗೆ ಹೆಚ್ಚಿನ ಆಸಕ್ತಿ ಮತ್ತು ಆತ್ಮಶ್ವಾಸ ಮೂಡಿಸಲು ಸಹಕಾರಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.






