Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.14ರಿಂದ ಉಡುಪಿ ಜಿಲ್ಲೆಯಾದ್ಯಂತ 70ನೇ...

ನ.14ರಿಂದ ಉಡುಪಿ ಜಿಲ್ಲೆಯಾದ್ಯಂತ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ10 Nov 2023 9:11 PM IST
share
ನ.14ರಿಂದ ಉಡುಪಿ ಜಿಲ್ಲೆಯಾದ್ಯಂತ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಗಳು

ಉಡುಪಿ, ನ.10: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿ ಯನ್ ಉಡುಪಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮಗಳು ನಡೆಯಲಿವೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಪ್ತಾಹದ ವಿವರಗಳನ್ನು ನೀಡಿದ ಅವರು, ಈ ಬಾರಿಯ ಸಹಕಾರಿ ಸಪ್ತಾಹದ ಧ್ಯೇಯ ವಾಕ್ಯ ‘ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು’ ಆಗಿದ್ದು, ಜಿಲ್ಲಾ ಸಹಕಾರಿ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ಇದನ್ನು ಆಚರಿಸಲಾಗುವುದು ಎಂದರು.

ನ.14ರಿಂದ 20ರವರೆಗೆ ಸಹಕಾರ ತತ್ವಗಳು ಮತ್ತು ಸಹಕಾರ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರ ಪ್ರಚಾರ ರಥವನ್ನು 7 ದಿನಗಳ ಕಾಲ ಸಹಕಾರ ಸಪ್ತಾಹ ನಡೆಯುವ ಸ್ಥಳಗಳಿಗೆ ಕಳುಸಲಾಗುತ್ತಿದೆ. ಭಾರತದಲ್ಲಿ ಸಹಕಾರ ಚಳುವಳಿ ಪ್ರಾರಂಭವಾಗಿ 119 ವರ್ಷಗಳು ಕಳೆದಿದ್ದು, ಜನತೆಯ ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಚಳವಳಿ ಶ್ರಮಿ ಸುತ್ತಾ ಬಂದಿದೆ ಎಂದರು.

ನ.14ರಂದು ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭ ಬೆಳಗ್ಗೆ 10ಕ್ಕೆ ಲಿಕೋ ಬ್ಯಾಂಕ್ ಗೋಲ್ಡನ್ ಜ್ಯುಬಿಲಿ ಸಭಾಂಗಣದಲ್ಲಿ ನಡೆಯಲಿದ್ದು, ಶಾಸಕ ಯಶಪಾಲ್ ಸುವರ್ಣ ಅವರು ಸಪ್ತಾಹವನ್ನು ಉದ್ಘಾಟಿಸುವರು. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸುವರು ಎಂದರು. ಎಲ್‌ಐಸಿ ಎಂಪ್ಲಾಯ.ಈಸ್ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಟೀಚರ್ಸ್‌ ಕೋ-ಆಪರೇಟಿವ್ ಬ್ಯಾಂಕ್‌ಗಳ ಸಹಯೋಗದೊಂದಿಗೆ ಇದು ನಡೆಯಲಿದೆ.

ನ.15ರ ಕಾರ್ಯಕ್ರಮ ಅಪರಾಹ್ನ 12ಗಂಟೆಗೆ ಕೋಟ ವ್ಯವಸಾಯ ಸಹಕಾರ ಸಂಘದ ವತಿಯಿಂದ ಕೋಟ ಬಿ.ಸಿ.ಹೊಳ್ಳ ಸಹಕಾರ ಸಭಾಭವನದಲ್ಲಿ, ನ.16ರ ಕಾರ್ಯಕ್ರಮ ಕಾರ್ಕಳ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ವತಿಯಿಂದ ಕಾರ್ಕಳ ಲ್ಯಾಂಪ್ಸ್ ಸಭಾಂಗಣದಲ್ಲಿ ಅಪರಾಹ್ನ 3:00ಕ್ಕೆ ಹಾಗೂ ನ.17ರ ಕಾರ್ಯಕ್ರಮ ಉಡುಪಿ ತಾಲೂಕು ಇಂಡಸ್ಟ್ರೀ ಯಲ್ ಸಹಕಾರ ಸಂಘದ ಆಶ್ರಯದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರಲ್ಲಿ ರಾಜ್ಯಮಟ್ಟದ ಸಪ್ತಾಹ: ನ.18ರ ಶುಕ್ರವಾರದಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮ ಈ ಬಾರಿ ಮಂಗಳೂರಿನ ಉರ್ವಾ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್ ರಾಜಣ್ಣ ನೆರವೇರಿಸಲಿದ್ದಾರೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ವಿಶೇಷವಾದ ವಸ್ತುಪ್ರದರ್ಶನ ಮಳಿಗೆಗಳನ್ನು ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರೆ, ಉತ್ತಮ ಸಹಕಾರ ಸಂಘಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರಶಸ್ತಿ ವಿತರಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್‌ಕುಮಾರ್ ಕಟೀಲ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಅಲ್ಲದೇ ಉಭಯ ಜಿಲ್ಲೆಗಳ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಯಶ್‌ಪಾಲ್ ಸುವರ್ಣ, ದ.ಕ ಹಾಲು ಒಕ್ಕೂಟದ ಆಧ್ಯಕ್ಷ ಸುಚರಿತ ಶೆಟ್ಟಿ, ಸಹಕಾರ ಇಲಾಖೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಹಕಾರ ಸಂಘಗಳ ನಿಬಂಧಕ ಕ್ಯಾ.ಡಾ.ಕೆ. ರಾಜೇಂದ್ರ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮುಂತಾದವರು ಭಾಗವಹಿಸುವರು ಎಂದರು.

ನ.19ರಂದು ಕುಂದಾಪುರ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಆಶ್ರಯದಲ್ಲಿ ಕೋಟೇಶ್ವರದ ಕಮಲಮ್ಮ ಸರ್ವೋ ತ್ತಮ ಬುದ್ಧ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 9:30ಕ್ಕೆ ಆರನೇ ದಿನದ ಕಾರ್ಯಕ್ರಮ ನಡೆಯಲಿದೆ. ಸಪ್ತಾಹದ ಸಮಾರೋಪ ಸಮಾರಂಭ ನ.20ರಂದು ಪಡುಬಿದ್ರಿಯ ಸಹಕಾರ ಸಂಗಮದ ವೈ.ಲಕ್ಷಣ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಪಡುಬಿದ್ರೆ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ನಡೆಯಲಿದೆ.

ಸಮಾರಂಭವನ್ನು ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಪಡುಬಿದ್ರೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ವೈ.ಸುಧೀರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಂಘದ ನವೀಕೃತ ಹವಾನಿಯಂತ್ರಿತ ಸಭಾಂಗಣ ಉದ್ಘಾಟಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಯೂನಿಯನ್‌ನ ನಿರ್ದೇಶಕರಾದ ಎ.ಹರೀಶ್ ಕಿಣಿ, ಶಂಕರ ಪೂಜಾರಿ ಕಟಪಾಡಿ, ಮನೋಹರ ಕರ್ಕೇರ, ಸಿಇಓ ಹಾಲಪ್ಪ ಕೋಡಿಹಳ್ಳಿ, ವಿಶ್ವನಾಥ್, ಅರುಣ್‌ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X