Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಏಕತೆ, ದೇಶಾಭಿಮಾನ ಮತ್ತಷ್ಟು...

ಏಕತೆ, ದೇಶಾಭಿಮಾನ ಮತ್ತಷ್ಟು ಬಲಗೊಳ್ಳಬೇಕಿದೆ: ಎಸಿ ರಶ್ಮಿ

ವಾರ್ತಾಭಾರತಿವಾರ್ತಾಭಾರತಿ15 Aug 2025 11:24 PM IST
share
ಏಕತೆ, ದೇಶಾಭಿಮಾನ ಮತ್ತಷ್ಟು ಬಲಗೊಳ್ಳಬೇಕಿದೆ: ಎಸಿ ರಶ್ಮಿ
ಕುಂದಾಪುರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆಚರಣೆ

ಕುಂದಾಪುರ: ಸ್ವಾತಂತ್ರ್ಯಕ್ಕಾಗಿ ದೇಶದ ಅನೇಕ ಮಂದಿ ತನು- ಮನವನ್ನು ಸಮರ್ಪಿಸಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ನೆನೆಯುವ ದಿನವಿದು. ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಇಂದಿಗೂ ಗಟ್ಟಿಯಾಗಿ ಕಾಪಾಡಿಕೊಂಡು ಬರುತ್ತಿರುವ ಸೈನಿಕರನ್ನು ಸ್ಮರಿಸಬೇಕು. ಸ್ವಾತಂತ್ರ್ಯ ಬರುವ ಸಮಯದಲ್ಲಿ ನಮ್ಮಲ್ಲಿರುವ ಏಕತೆ, ದೇಶಾಭಿಮಾನ ಇನ್ನೂ ಕೂಡ ಎಲ್ಲರಲ್ಲೂ ಮತ್ತಷ್ಟು ಬಲಗೊಳ್ಳಬೇಕಿದೆ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದ್ದಾರೆ.

ಕುಂದಾಪುರ ತಾಲೂಕು ಆಡಳಿತದ ನೇತೃತ್ವದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಪ್ರತಿಯೊಬ್ಬ ಭಾರತೀಯನಲ್ಲಿ ನನ್ನ ದೇಶ ಎಂಬ ದೇಶಾಭಿಮಾನ ಸೃಷ್ಟಿಯಾಗಬೇಕು. ಭಾರತವಿಂದು ವಿಶ್ವದ ಬಲಿಷ್ಠ ರಾಷ್ಟ್ರವಾಗಿ ಎಲ್ಲ ರಂಗದಲ್ಲೂ ಮುಂಚೂಣಿಯಲ್ಲಿದೆ. ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಪ್ರಬಲ ಸಂವಿಧಾನವನ್ನು ನೀಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಮುಖ್ಯಾಧಿಕಾರಿ ಆನಂದ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್ ಕೆ., ಫಿಜಿಶಿಯನ್ ಡಾ.ನಾಗೇಶ್, ಯುವಜನಾ ಸೇವಾ ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಕಿಟ್‌ಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.

Tags

Kundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X