ಡಿ.8: ಡಾ.ಎಚ್.ಎಸ್.ಶೆಟ್ಟಿಗೆ ಅಭಿನಂದನೆ

ಉಡುಪಿ, ಡಿ.7: ಇತ್ತೀಚೆಗೆ ಬೆಳಗಾವಿಯ ಶ್ರೀವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಗೌರವಕ್ಕೆ ಭಾಜನರಾದ ಬೆಂಗಳೂರಿನ ಉದ್ಯಮಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಪ್ರವರ್ತಕರೂ ಆದ ಡಾ.ಎಚ್.ಎಸ್. ಶೆಟ್ಟಿ ಇವರಿಗೆ ಅಭಿನಂದನಾ ಕಾರ್ಯಕ್ರಮ ಡಿ.8ರ ಶುಕ್ರವಾರ ಸಂಜೆ 5:30ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೆ. ರಘುಪತಿ ಭಟ್ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ಕಲಾರಂಗದ ಪ್ರಕಟಣೆ ತಿಳಿಸಿದೆ.
Next Story





