ಸೆ.9ರಂದು ಸಚಿವ ರಿಝ್ವಾನ್ ಅರ್ಷದ್ ಉಡುಪಿಗೆ ಭೇಟಿ

ಉಡುಪಿ, ಸೆ.5: ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಅವರು ಸೆ.9ರಂದು ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲಿದ್ದಾರೆ.
ಸೆ.8ರ ಮಂಗಳವಾರ ರಾತ್ರಿ 10:35ಕ್ಕೆ ಬೆಂಗಳೂರಿನಿಂದ ವಿಮಾನ ಮೂಲಕ ಮಂಗಳೂರಿಗೆ ಆಗಮಿಸುವ ಸಚಿವರು ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಸೆ.9ರಂದು ಬೆಳಗ್ಗೆ 8:30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ಆಗಮಿಸುವ ರಿಝ್ವಾನ್, 10:30ಕ್ಕೆ ಮಣಿಪಾಲ ರಜತಾದ್ರಿಯ ಅಟಲ್‌ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯುವ ತಾಲೂಕು ಮಟ್ಟದ ಪ್ರಜಾ ಸೇವೆ ಆಂದೋಲನವನ್ನು ಉಡುಪಿ ಜಿಲ್ಲೆಯಲ್ಲಿ ಉದ್ಘಾಟಿಸಲಿದ್ದಾರೆ. ಬಳಿಕ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿ ಸುವ ಅವರು ಅಪರಾಹ್ನ 3:00ಗಂಟೆಗೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.
Next Story




