Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.9ರ ಮ್ಯಾರಥಾನ್‌ಗೆ ಮಣಿಪಾಲ ಸಜ್ಜು:...

ಫೆ.9ರ ಮ್ಯಾರಥಾನ್‌ಗೆ ಮಣಿಪಾಲ ಸಜ್ಜು: 7ನೇ ಮಣಿಪಾಲ ಮ್ಯಾರಥಾನ್‌ಗೆ 20,000ಕ್ಕೂ ಅಧಿಕ ಸ್ಪರ್ಧಿಗಳು

ವಾರ್ತಾಭಾರತಿವಾರ್ತಾಭಾರತಿ1 Feb 2025 7:58 PM IST
share
ಫೆ.9ರ ಮ್ಯಾರಥಾನ್‌ಗೆ ಮಣಿಪಾಲ ಸಜ್ಜು: 7ನೇ ಮಣಿಪಾಲ ಮ್ಯಾರಥಾನ್‌ಗೆ 20,000ಕ್ಕೂ ಅಧಿಕ ಸ್ಪರ್ಧಿಗಳು

ಉಡುಪಿ, ಫೆ.1: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ವತಿಯಿಂದ ವಿದ್ಯಾರ್ಥಿಗಳೇ ಆಯೋಜಿಸುವ ದೇಶದ ಅತಿದೊಡ್ಡ ಮ್ಯಾರಥಾನ್‌ಗಳಲ್ಲಿ ಒಂದಾಗ ‘ಮಣಿಪಾಲ ಮ್ಯಾರಥಾನ್’ನ ಏಳನೇ ಅಧ್ಯಾಯ ಫೆ.9ರ ರವಿವಾರ ನಡೆಯಲಿದ್ದು, ಈ ಬಾರಿ ದಾಖಲೆಯ 20,000ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹೆಯ ಪ್ರೊ. ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ 15,000 ಸ್ಪರ್ಧಿಗಳು ದೇಶದ ಈ ಪ್ರತಿಷ್ಠಿತ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದು, ಈ ಬಾರಿ ಇಂದಿನವರೆಗೆ 20,000ಕ್ಕೂ ಅಧಿಕ ಮಂದಿ ಭಾಗವಹಿಸಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಫೆ.2ರ ಸಂಜೆಯವರೆಗೆ ಆನ್‌ಲೈನ್‌ನಲ್ಲಿ ಹೆಸರು ನೊಂದಾಯಿಸಲು ಅವಕಾಶವಿದೆ ಎಂದರು.

ಮಣಿಪಾಲ ಮ್ಯಾರಥಾನ್ ಹೆಚ್ಚೆಚ್ಚು ವಿದೇಶಿ ಕ್ರೀಡಾಪಟುಗಳನ್ನು ಆಕರ್ಷಿಸುತಿದ್ದು, ಜಪಾನ್, ಅಮೆರಿಕ, ಇಂಗ್ಲೆಂಡ್ ಫ್ರಾನ್ಸ್, ಜರ್ಮನಿ, ಟರ್ಕಿ, ಇಥಿಯೋಪಿಯಾ, ಕಿನ್ಯಾ, ನಮೀಬಿಯಾ,ಉಗಾಂಡ, ಮಲಾವಿ, ಕಾಂಗೋ, ಘಾನಾ, ಸುಡಾನ್, ಅಬುಧಾಬಿ, ಯುಎಇ ಹಾಗೂ ಆಸ್ಟ್ರೇಲಿಯಾ ದೇಶಗಳ 100ಕ್ಕೂ ಹೆಚ್ಚು ಸ್ಪರ್ಧಿಗಳು ಇದರಲ್ಲಿ ಭಾಗವಹಿಸುವ ಆಸಕ್ತಿಯನ್ನು ತೋರಿಸಿದ್ದು ಈಗಾಗಲೇ ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಡಾ.ಬಲ್ಲಾಳ್ ತಿಳಿಸಿದರು.

ಅಲ್ಲದೇ ಈ ಬಾರಿ ವಿವಿಧ ದೇಶಗಳ 10,000ಕ್ಕೂ ಅಧಿಕ ಆಸಕ್ತ ಕ್ರೀಡಾಪಟುಗಳು ‘ವರ್ಚುವಲ್ ರನ್’ನಲ್ಲಿ ಭಾಗವಹಿಸಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇವರು ಫೆ.7ರಿಂದ 9ರ ನಡುವೆ ತಾವಿರುವ ಸ್ಥಳದಲ್ಲೇ ಐದು ಕಿ.ಮೀ. ದೂರ ಓಡಿ ದಾಖಲೆ ಸಹಿತ ಆ್ಯಪ್‌ನಲ್ಲಿ ವಿವರಗಳನ್ನು ಅಪ್‌ಲೋಡ್ ಮಾಡಿದರೆ ಅವರಿಗೆ ಇ-ಪ್ರಮಾಣಪತ್ರ, ಡಿಜಿಟಲ್ ಬಿಬ್ ಹಾಗೂ ವಿಶೇಷ ಮಣಿಪಾಲ್ ಮ್ಯಾರಥಾನ್ ಸರಕುಗಳನ್ನು ಕಳುಹಿಸಿಕೊಡಲಾಗುವುದು ಎಂದರು.

‘ಚಲನೆಯಲ್ಲಿ ಆವಿಷ್ಕಾರ: ಆರೋಗ್ಯ ಮತ್ತು ಸದೃಢತೆಗಾಗಿ ತಂತ್ರಜ್ಞಾನದ ಅಳವಡಿಕೆ’ ಎಂಬುದು ಈ ಬಾರಿಯ ಮಣಿಪಾಲ ಮ್ಯಾರಥಾನ್‌ನ ಘೋಷವಾಕ್ಯವಾಗಿದ್ದು, ಸಮಾಜದ ಎಲ್ಲರನ್ನೂ ಒಳಗೊಳ್ಳುವ ಸದುದ್ದೇಶದೊಂದಿಗೆ ಈ ಬಾರಿಯ ಸ್ಪರ್ಧೆ ಯನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರಿನ ಸಮರ್ಥನಂ ಟ್ರಸ್ಟ್‌ನಿಂದ 300ಕ್ಕೂ ಅಧಿಕ ದೃಷ್ಟಿಹೀನರು ಹಾಗೂ 200ಕ್ಕೂ ಅಧಿಕ ಮಂದಿ ವಿಕಲಚೇತನರು ಈ ಬಾರಿಯ ಮ್ಯಾರಥಾನ್‌ನ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ ಎಂದರು.

ರವಿವಾರ ಮುಂಜಾನೆ 5ಕ್ಕೆ ಪ್ರಾರಂಭ: ಮಣಿಪಾಲ ಮ್ಯಾರಥಾನ್ ಫೆ.9ರ ರವಿವಾರ ಮುಂಜಾನೆ 5 ಗಂಟೆಗೆ ಪ್ರಾರಂಭ ಗೊಳ್ಳಲಿದೆ. 42.195ಕಿ.ಮೀ. ದೂರದ ಈ ಸ್ಪರ್ಧೆ ಮಾಹೆಯಲ್ಲಿ ಪ್ರಾರಂಭಗೊಂಡು ಪೆರಂಪಳ್ಳಿ, ದೊಡ್ಡಣಗುಡ್ಡೆ, ಅಂಬಾಗಿಲು, ಸಂತೆಕಟ್ಟೆ, ಕೆಮ್ಮಣ್ಣು, ಹೂಡೆ, ಮಲ್ಪೆಬೀಚ್, ಕಲ್ಮಾಡಿ, ಕಿದಿಯೂರು, ಉದ್ಯಾವರ, ಕಿನ್ನಿಮೂಲ್ಕಿ, ಉಡುಪಿ, ಕಲ್ಸಂಕ ಮಾರ್ಗವಾಗಿ ಮಾಹೆಯಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

ಅಲ್ಲದೇ 21.098ಕಿ.ಮೀ. ದೂರದ ಹಾಫ್ ಮ್ಯಾರಥಾನ್‌ಗೆ ಮುಂಜಾನೆ 5:30ಕ್ಕೆ, 10ಕಿ.ಮೀ. ದೂರದ ಓಟಕ್ಕೆ 6:00ಕ್ಕೆ. 5ಕಿ.ಮೀ. ಓಟಕ್ಕೆ 6:45ಕ್ಕೆ ಹಾಗೂ ಮಾಹೆ ಕ್ಯಾಂಪಸ್ ಒಳಗೆ ನಡೆಯುವ ಮೂರು ಕಿ.ಮೀ. ದೂರದ ಫನ್ ರನ್‌ಗೆ ಬೆಳಗ್ಗೆ 8:00ಗಂಟೆಗೆ ಚಾಲನೆ ನೀಡಲಾಗುವುದು ಎಂದರು.

ಮ್ಯಾರಥಾನ್ ನಡೆಯುವ ಫೆ.9ರ ರವಿವಾರ ಮುಂಜಾನೆ 4ರಿಂದ 11 ಗಂಟೆಯವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ವಿಶೇಷ ಹಬ್ಬದ ವಾತಾವರಣ, ಲವಲವಿಕೆಯ ವಾತಾವರಣ ಇರುತ್ತದೆ ಎಂದು ಡಾ.ಎಚ್. ಎಸ್. ಬಲ್ಲಾಳ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹೆಯ ಪ್ರೊ ವೈಸ್ ಚಾನ್ಸಲರ್‌ಗಳಾದ ಡಾ.ಶರತ್ ರಾವ್, ಡಾ.ನಾರಾಯಣ ಸಭಾಹಿತ್, ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಸಿಒಒ ರವಿರಾಜ್ ಹಾಗೂ ಕ್ರೀಡಾಸಂಯೋಜಕ ಡಾ.ವಿನೋದ್ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X