ಉತ್ತರ ಪ್ರದೇಶದ ಮೂಲದ ಮಗು ಮೃತ್ಯು

ಸಾಂದರ್ಭಿಕ ಚಿತ್ರ
ಮಣಿಪಾಲ, ಡಿ.13: ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮೂಲದ ಮಗುವೊಂದು ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ಪರ್ಕಳ ದೇವಿನಗರದ ನಿವಾಸಿ ನೀಲಾಂಬರಿ ಎಂಬವರ ಒಂದೂವರೆ ವರ್ಷದ ಮಗು ದೀಪಾಲಿ ಎಂದು ಗುರುತಿಸಲಾಗಿದೆ. ದೀಪಾಲಿ ಹುಟ್ಟಿನಿಂದಲೂ ಲಿವರಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಸ್ವಂತ ಊರಾದ ಉತ್ತರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಚಿಕಿತ್ಸೆ ಪಡೆದು ಡಿ.11ರಂದು ರೈಲಿನಲ್ಲಿ ಹೊರಟಿದ್ದರು.
ಡಿ.12ರಂದು ರಾತ್ರಿ ಇಂದ್ರಾಳಿ ರೈಲ್ವೇ ನಿಲ್ದಾಣಕ್ಕೆ ಬರುವಾಗ ದೀಪಾಲಿ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಬಗ್ಗೆ ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





