ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

ಬ್ರಹ್ಮಾವರ, ನ.13: ವೈಯಕ್ತಿಕ ಕಾರಣದಿಂದ ಮನನೊಂದ ಕೆಂಜೂರು ಗ್ರಾಮದ ಮಹಾಬಲ ನಾಯ್ಕ(46) ಎಂಬವರು ನ.12ರಂದು ಮಧ್ಯಾಹ್ನ 3.45 ಗಂಟೆಗೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಬೀಜಾಡಿ ಗ್ರಾಮದ ನಿವಾಸಿ ವಿಜಯ್(44) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.12ರಂದು ಮಧ್ಯಾಹ್ನ ವೇಳೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಮದ್ಯ ಸೇವಿಸುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ನಿಟ್ಟೆ ಗ್ರಾಮದ ಅತ್ತೂರು ನಾರ್ತ್ ಚೇತನಾ ಹಳ್ಳಿ ನಿವಾಸಿ ಚಂದ್ರಕಾಂತ(30) ಎಂಬವರು ನ.12ರಂದು ರಾತ್ರಿ ವೇಳೆ ಮನೆಯ ಸಮೀಪ ಹಾಡಿಯಲ್ಲಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





