Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿಯಲ್ಲಿ ಭೀಕರ ಅಗ್ನಿ ದುರಂತ;...

ಗಂಗೊಳ್ಳಿಯಲ್ಲಿ ಭೀಕರ ಅಗ್ನಿ ದುರಂತ; ಒಂಭತ್ತು ಬೋಟುಗಳು, ದೋಣಿಗಳು, 3 ಬೈಕ್ ಬೆಂಕಿಗಾಹುತಿ

ವಾರ್ತಾಭಾರತಿವಾರ್ತಾಭಾರತಿ13 Nov 2023 8:37 PM IST
share
ಗಂಗೊಳ್ಳಿಯಲ್ಲಿ ಭೀಕರ ಅಗ್ನಿ ದುರಂತ; ಒಂಭತ್ತು ಬೋಟುಗಳು, ದೋಣಿಗಳು, 3 ಬೈಕ್ ಬೆಂಕಿಗಾಹುತಿ

ಕುಂದಾಪುರ, ನ.17: ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ವಾರ್ಪ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ ಲಂಗಾರು ಹಾಕಿದ್ದ ಒಂಬತ್ತಕ್ಕೂ ಅಧಿಕ ಮೀನುಗಾರಿಕಾ ಬೋಟುಗಳು, ದೋಣಿ, ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಇದರಿಂದ ಸುಮಾರು 10 ಕೋಟಿ ರೂ.ಗೂ ಅಧಿಕ ಮೊತ್ತ ನಷ್ಟವಾಗಿರುವ ಬಗ್ಗೆ ವರದಿಯಾಗಿದೆ.

ಮಳೆಗಾಲಕ್ಕೂ ಮೊದಲು ಲಂಗಾರು ಹಾಕಿದ ಬೋಟೊಂದರಲ್ಲಿ ಇಂದು ಬೆಳಗ್ಗೆ ಅಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತೆನ್ನ ಲಾಗಿದೆ. ಬೆಂಕಿಯ ಕೆನ್ನಾಲಿಗೆ ಒಂದಕ್ಕೊಂದು ತಾಗಿಸಿಕೊಂಡು ನಿಲ್ಲಿಸಲಾದ ಬೋಟುಗಳಿಗೆ ವಿಸ್ತರಿಸಿಕೊಂಡು ಹೋಯಿತು. ಇದರಿಂದ ಹಲವು ಬೋಟುಗಳು ಬೆಂಕಿಗೆ ಆಹುತಿಯಾದವು.

ಬೆಂಕಿ ಅವಘಡದಿಂದ ಸುಟ್ಟ 9 ಬೋಟುಗಳಲ್ಲಿ ಪರ್ಶೀನ್, 370 ಮೊದಲಾದ ದುಬಾರಿ ಬೋಟುಗಳಿದ್ದು ಉಳಿದಂತೆ ಸಣ್ಣ ದೋಣಿಗಳು, ಬಲೆಗಳು, ವಾರ್ಪ್ ಪ್ರದೇಶದಲ್ಲಿದ ಶೆಡ್‌ನಲ್ಲಿ ಇರಿಸಿದ್ದ ಮೂರಕ್ಕು ಅಧಿಕ ಬೈಕುಗಳ ಸಹಿತ ವಿವಿಧ ಪರಿಕರ ಗಳು ಸುಟ್ಟು ಹೋಗಿವೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ ಶ್ರೀಗುರು, ಮೂಕಾಂಬಿಕಾ, ಪ್ರಿಯದರ್ಶಿನಿ, ಯಕ್ಷೇಶ್ವರಿ, ಶ್ರೀಮಂಜುನಾಥ, ಸೀ ಫರ್ಲ್, ಮಧುಶ್ರೀ, ಗುರುಪ್ರಸಾದ್, ಜಲರಾಣಿ ಹೆಸರಿನ ಬೋಟುಗಳು ಅಗ್ನಿಗಾಹುತಿಯಾಗಿವೆ. ಅಣ್ಣಪ್ಪ ಸ್ವಾಮಿ ಹೆಸರಿನ ದೋಣಿಗೆ ಸಂಬಂಧಿಸಿದ 50 ಲಕ್ಷ ಮೌಲ್ಯದ ಬಲೆ ಸೆಟ್ ಹಾಗೂ ಒಂದಷ್ಟು ಸಣ್ಣ ದೋಣಿಗಳು ಹಾನಿಗೀಡಾಗಿವೆ ಎಂದು ತಿಳಿದು ಬಂದಿದೆ. ಈ ದುರಂತದಿಂದ ಮೇಲ್ನೋಟಕ್ಕೆ 10ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಗೆ ಹರಸಾಹಸ: ಬೆಂಕಿ ದುರಂತ ಸಂಭವಿಸಿದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಈ ಮಧ್ಯೆ ಸ್ಥಳೀಯರೇ ಸೇರಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.

ಬಳಿಕ ಬೆಳಗ್ಗೆ 10.30ರ ಸುಮಾರಿಗೆ ಕುಂದಾಪುರ, ಬೈಂದೂರು, ಉಡುಪಿ ಯಿಂದ ಅಗ್ನಿಶಾಮಕ ದಳದ ಮೂರು ವಾಹನ ಗಳು ಆಗವಿಮಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿತು. ಬೆಂಕಿ ಭೀಕರವಾಗಿ ಹರಡುತ್ತಿದ್ದ ಪರಿಣಾಮ ಅಗ್ನಿ ಶಾಮಕದಳ ವಾಹನಗಳಲ್ಲಿದ್ದ ನೀರು ಸಾಕಾಗದೆ, 4 ಪಂಪ್ ಸೆಟ್‌ಗಳ ಮೂಲಕ ನದಿಯಿಂದ ನೀರು ಬಿಟ್ಟು ನಂದಿಸುವ ಕಾರ್ಯ ಮಾಡ ಲಾಯಿತು. ಇಲ್ಲದಿದ್ದರೆ ಇಡೀ ಪ್ರದೇಶವೇ ಸುಟ್ಟು ಬೂದಿಯಾಗುವ ಸಂಭವವಿತ್ತು ಎಂದು ಸ್ಥಳೀಯ ಮೀನುಗಾರರು ಹೇಳುತ್ತಾರೆ.

ಮೀನುಗಾರರು, ಸಾರ್ವಜನಿಕರು, ಪೊಲೀಸರು ಖಾಸಗಿ ವಾಹನಗಳಲ್ಲಿ ಟ್ಯಾಂಕ್ ಮೂಲಕ ನೀರು ಬಳಸಿ ಅಗ್ನಿ ಹತೋಟಿಗೆ ತರಲು ಹರಸಾಹಸ ಪಟ್ಟರು. ಇದರಲ್ಲಿ ಸರ್ವಧರ್ಮಿಯರು ಕೈಜೋಡಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಮಧ್ಯಾಹ್ನ 2.30ರ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ಬಂತು. ಸುಮಾರು ನಾಲ್ಕು ಗಂಟೆಗಳ ಕಾರ್ಯಾಚರಣೆಯಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಸಾವಿರಾರು ಮಂದಿ ಜಮಾವಣೆ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಲೆ ಸಾವಿರಾರು ಮಂದಿ ಘಟನಾ ಸ್ಥಳಕ್ಕೆ ಆಗಮಿಸಿ ದರು. ಟ್ರಾಫಿಕ್ ಸಮಸ್ಯೆ ತಪ್ಪಿಸಲು ಮ್ಯಾಂಗನೀಸ್ ರಸ್ತೆ ಪ್ರವೇಶದಲ್ಲಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರನ್ನು ನಿಯೋಜಿಸಲಾಗಿತ್ತು.

ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಮೀನುಗಾರರಿರೊಂದಿಗೆ ಚರ್ಚೆ ನಡೆಸಿ ದುರಂತದ ಕುರಿತು ಮಾಹಿತಿ ಪಡೆದು ಕೊಂಡರು.

ಅದೇ ರೀತಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಷ್ಮೀ ಎಸ್.ಆರ್., ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸವಿತ್ರತೇಜ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕಿ ಅಂಜನಾದೇವಿ, ಗಂಗೊಳ್ಳಿ ಠಾಣಾ ಪೊಲೀಸರು, ಕರಾವಳಿ ಕಾವಲು ಪಡೆ, ಕಂದಾಯ, ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಗಂಗೊಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದೇನೆ. ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ಅವರೊಂದಿಗೂ ಮಾತನಾಡಿದ್ದೇನೆ’

-ಲಕ್ಷ್ಮೀ ಹೆಬ್ಬಾಳಕರ್, ಉಸ್ತುವಾರಿ ಸಚಿವರು, ಉಡುಪಿ ಜಿಲ್ಲೆ

‘ಅಗ್ನಿ ಅವಘಡದಿಂದ ಸುಮಾರು 10 ಕೋಟಿಯಷ್ಟು ನಷ್ಟ ಉಂಟಾಗಿದ್ದು, ರಾಜ್ಯ ಸರಕಾರ ಕೂಡಲೇ ಬೋಟ್ ಮಾಲೀಕ ರಿಗೆ ತಲಾ 50 ಲಕ್ಷ ಪರಿಹಾರ ನೀಡಿ ಸಂಕಷ್ಟಕ್ಕೀಡಾದ ಮೀನುಗಾರರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರ ನೀಡಬೇಕು. ಜಿಲ್ಲೆಯ 5 ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜೊತೆಯಾಗಿ ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ವಿಶೇಷ ಪ್ರಕರಣದಡಿ ಗರಿಷ್ಠ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು’

-ಯಶ್‌ಪಾಲ್ ಸುವರ್ಣ, ಶಾಸಕರು, ಉಡುಪಿ












share
ವಾರ್ತಾಭಾರತಿ
ವಾರ್ತಾಭಾರತಿ
Next Story
X