Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅ.15: ಉಡುಪಿಯಲ್ಲಿ ಮಹಿಷ ದಸರಾ,...

ಅ.15: ಉಡುಪಿಯಲ್ಲಿ ಮಹಿಷ ದಸರಾ, ಮೂಲನಿವಾಸಿಗಳ ಸಾಂಸ್ಕೃತಿಕ ಹಬ್ಬ

ವಾರ್ತಾಭಾರತಿವಾರ್ತಾಭಾರತಿ4 Oct 2023 7:02 PM IST
share
ಅ.15: ಉಡುಪಿಯಲ್ಲಿ ಮಹಿಷ ದಸರಾ, ಮೂಲನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ, ಅ.4: ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಅ.15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲಕ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಕೋಟ್ಯಾನ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಪೂರ್ವಾಗ್ರಹ ಪೀಡಿತ ಹಿಂದೂ ಧರ್ಮಾಂಧರು ಮಹಿಷಾಸುರ ಒಬ್ಬ ದುಷ್ಟ, ನೀಚ, ಪ್ರಜಾಕಂಟಕ, ನರಭಕ್ಷಕ ಇತ್ಯಾದಿಯಾಗಿ ಆತನನ್ನು ಒಬ್ಬ ವಿಲನ್ ಎಂಬಂತೆ ಚಿತ್ರಿಸಿರುವುದನ್ನು ಕಾಣುತ್ತೇವೆ. ಆದರೆ ಮಹಿಷಾಸುರ ಈ ದೇಶದ ಅಸುರ ಸಾಮ್ರಾಜ್ಯದ ನಾಯಕರಲ್ಲಿ ಅಗ್ರಗಣ್ಯನಾಗಿದ್ದವ. ಆರ್ಯ ಮತ್ತು ಬುದ್ಧಪೂರ್ವ ಪ್ರಾಗೈತಿಹಾಸ ಯುಗದ ಚಕ್ರೇಶ್ವರ. ಮೈಸೂರಿನ ಹುಟ್ಟಿಗೆ ಕಾರಣನಾ ದವ ಹಾಗೂ ಪ್ರಾಚೀನ ಮಹಿಷಾಮಂಡಲದ ದೊರೆಯಾಗಿದ್ದಾತ ಎಂದರು.

ಬಹುಜನರ ಭಾಗ್ಯವಿದಾತ, ಬೌದ್ಧರ ನೈಜ ಇತಿಹಾಸವನ್ನು, ಮಹಿಷ ಪರಂಪರೆಯನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಮತ್ತು ವೈದಕ ಸಂಸ್ಕೃತಿಗೆ ಪರ್ಯಾಯವಾಗಿ ಪ್ರತಿಸಂಸ್ಕೃತಿ ಸೃಷ್ಟಿಸುವ ಸಲುವಾಗಿ ಅಂಬೇಡ್ಕರ್ ಯುವ ಸೇನೆ ಆಯೋಜಿಸಿರುವ ಮಹಿಷ ದಸರಾ ಸಾರ್ವಕಾಲಿಕ ಮಹತ್ವ ಹೊಂದಲಿದೆ ಎಂದು ಜನಪರ ಹೋರಾಟಗಾರ ಹಾಗೂ ದಲಿತ ಚಿಂತಕ ಜಯನ್ ಮಲ್ಪೆ ತಿಳಿಸಿದರು.

ಅ.15ರಂದು ಬೆಳಗ್ಗೆ 10:30ಕ್ಕೆ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಿಂದ ವಿವಿಧ ವಾಹನಗಳ ಜಾಥಾದೊಂದಿಗೆ ಮಹಿಷ ರಾಜನ ಟ್ಯಾಬ್ಲೋ ಮೆರವಣಿಗೆ ಹೊರಟು ಜೋಡುಮಾರ್ಗವಾಗಿ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಬನ್ನಂಜೆ ಮೂಲಕ ಕರಾವಳಿ ಬೈಪಾಸ್‌ನಿಂದ ಆದಿವುಡುಪಿಯ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಮುಕ್ತಾಯಗೊಳ್ಳಲಿದೆ.

ಬಳಿಕ ಸಭಾ ಕಾರ್ಯಕ್ರಮ ಹಾಗೂ ಮಹಿಷಾಸುರ ಯಾರು ಎಂಬ ವಿಚಾರಸಂಕಿರಣ 11:00 ಗಂಟೆಗೆ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಕಲಬುರಗಿಯ ಸಂಶೋಧಕ ಡಾ.ವಿಠಲ ವಗ್ಗನ್ ಕಾರ್ಯಕ್ರಮ ಉದ್ಘಾಟಿಸಿ ವಿಚಾರ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಲಿತ ಚಿಂತಕ ನಾರಾಯಣ ಮಣೂರು ಹಾಗೂ ಪ್ರಗತಿಪರ ಚಿಂತಕ ಶ್ರೀರಾಮ ದಿವಾಣ ಭಾಗವಹಿಸಲಿದ್ದಾರೆ ಎಂದು ಹರೀಶ್ ಸಾಲ್ಯಾನ್ ತಿಳಿಸಿದರು.

ನಾಡಿನ ಪ್ರಗತಿಪರ ಚಳುವಳಿಗಾರರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತರು, ದಲಿತ ಸಂಘಸಂಸ್ಥೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ರಾಕ್ಷಸರೆಲ್ಲಾ ರಕ್ಷಕರು, ಈ ದೇಶದ ಮೂಲನಿವಾಸಿಗಳು ಎಂಬುದನ್ನು ಸಾಬೀತು ಪಡಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಯುವ ಸೇನೆಯ ದಯಾನಂದ ಕಪ್ಪೆಟ್ಟು, ಲೋಕೇಶ್ ಪಡುಬಿದ್ರಿ, ಸಂಜೀವ ಬಳ್ಕೂರು, ಗಣೇಶ ನೆರ್ಗಿ ಉಪಸ್ಥಿತರಿದ್ದರು.

ಸಾಮ್ರಾಟ್ ಅಶೋಕ ಚಕ್ರವರ್ತಿ ಕಳಿಂಗ ಯುದ್ಧದಿಂದಾದ ಸಾವುನೋವು ಗಳಿಂದ ಮನಪರಿವರ್ತನೆಯಾಗಿ ಶಸ್ತ್ರವನ್ನು ತ್ಯಜಿಸಿ ಇನ್ನು ಮುಂದೆ ಯುದ್ಧ ಮಾಡುವುದಿಲ್ಲವೆಂದು ಶಪಥ ಮಾಡುತ್ತಾನೆ. ಆಗ ಒಂಭತ್ತು ದಿನಗಳ ಕಾಲ ಉಪವಾಸ ಮಾಡಿ ಬೌದ್ಧ ಧರ್ಮವನ್ನು ಸ್ವೀಕರಿಸುತ್ತಾನೆ. ಈ ದಿನವನ್ನೇ ವಿಜಯ ದಶಮಿ ದಿನವೆಂದು ಆಚರಿಸುತ್ತಾ ಬರಲಾಗುತ್ತಿತ್ತು. ಆದರೆ ಪುರೋಹಿತ ಶಾಹಿಗಳು ಅದನ್ನು ತಿರುಚಿ ಕಾಲ್ಪನಿಕ ದೇವಿಯ ಸುಳ್ಳಿನ ಕತೆ ಕಟ್ಟಿ ದಸರಾ ಉತ್ಸವವನ್ನು ಆಚರಣೆಗೆ ತಂದರು ಎಂದು ದಲಿತ ಚಿಂತಕ ಜಯನ್ ಮಲ್ಪೆ ತಿಳಿಸಿದರು.

"ಸುಳ್ಳೆಂಬ ಮೋಡಗಳು ಸತ್ಯವೆಂಬ ಸೂರ್ಯನನ್ನು ಮುಚ್ಚಿಡಲು ಸಾಧ್ಯವಿಲ್ಲ. ಅದೇ ರೀತಿ ಪುರಾಣವೆಂಬ ಕತ್ತಲೆಯಿಂದ ಇತಿಹಾಸವೆಂಬ ಬೆಳಕಿನೆಡೆಗೆ ದಲಿತ ಸಮಾಜವನ್ನು ಮುನ್ನಡೆಸುವುದು ಇಂದಿನ ಬಹುದೊಡ್ಡ ಅಗತ್ಯತೆಯಾಗಿದೆ".

-ಜಯನ್ ಮಲ್ಪೆ, ದಲಿತ ಚಿಂತಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X