ಪೌರಕಾರ್ಮಿಕರ ಮೇಲೆ ದೌರ್ಜನ್ಯ: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡನೆ

ಸಾಂದರ್ಭಿಕ ಚಿತ್ರ
ಉಡುಪಿ, ಸೆ.17: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಕೊರಗ ಸಮುದಾಯದ ಪೌರಕಾರ್ಮಿಕರ ಮೇಲೆ ನಡೆದ ದೌರ್ಜನ್ಯವನ್ನು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತೀವ್ರವಾಗಿ ಖಂಡಿಸಿದೆ.
ಕಾರವಾರ ನಗರಸಭೆಯ ಪೌರ ಕಾರ್ಮಿಕರಾದ ಚೇತನ್ ಕುಮಾರ್ ವೆಂಕಟೇಶ ಕೊರಗ ಮತ್ತು ಪುರುಷೋತ್ತಮ ವೆಂಕಟೇಶ ಕೊರಗ ಸೆ.12ರಂದು ಕರ್ತವ್ಯ ಮುಗಿಸಿ ಮನೆಗೆ ಹೋಗುವಾಗ ಕ್ಷುಲ್ಲಕ ಕಾರಣಕ್ಕಾಗಿ ನಗರದ ಕೊಡಿಬೇರ ದೇವಸ್ಥಾನ ರಸ್ತೆಯ ಬಳಿ ಸ್ಥಳೀಯ ನಿವಾಸಿ ನಿತಿನ್ ಹರಿಕಾಂತ ಎಂಬಾತ ಪೌರಕಾರ್ಮಿಕರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಸಾರ್ವಜನಿಕ ವಾಗಿ ಜಾತಿ ನಿಂದನೆ ಸೇರಿದಂತೆ ಅಸಭ್ಯ ಭಾಷೆಗಳಿಂದ ನಿಂದಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರಗರು ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿ ರುವ ಸಣ್ಣ ಸಮುದಾಯ. ಸರಕಾರವು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರಗ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಗುರುತಿಸಿದೆ. ಅವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ನೀಡುವ ಪಿ.ವಿ.ಟಿ.ಜಿ ಅನುದಾನಗಳು, ರಕ್ಷಣೆ ಗಳಿಂದ ವಂಚಿತರಾಗಿದ್ದಾರೆ. ಎಲ್ಲರು ಅಸಾಹಾಯಕ ಪರಿಸ್ಥಿತಿಯಲ್ಲಿ ಬದುಕು ವಂತಾಗಿದೆ. ಇಂತಹ ಅಸಹಾಯಕ ಸಮುದಾಯದ ಮೇಲೆ ದೌರ್ಜನ್ಯ ನಡೆಸುವುದು ಅತ್ಯಂತ ಖಂಡನೀಯವಾಗಿದೆ.
ಕೊರಗ ಸಮುದಾಯದ ಪೌರಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೂಡಲೇ ಕೇಸು ದಾಖಲಿಸಿ ಬಂಧಿಸಿಬೇಕು. ಸಂತ್ರಸ್ತ ಕೊರಗ ಸಮುದಾಯ ದವರಿಗೆ ರಕ್ಷಣೆ ಮತ್ತು ನ್ಯಾಯ ಒದಗಿಸಬೇಕು ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉಡುಪಿ ಜಿಲ್ಲಾ ಸಂಚಾಲಕ ಶ್ರೀಧರ ನಾಡ ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.







