ಅಪಘಾತ: ಕಾರು ಬೆಂಕಿಗೆ ಆಹುತಿ

ಉಡುಪಿ, ನ.28: ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಬೆಂಕಿಗಾಹುತಿ ಯಾದ ಘಟನೆ ಸಾಲಿಗ್ರಾಮದ ಗುಂಡ್ಮಿ ಸಮೀಪ ನಡೆದಿದೆ.
ಗೋಕರ್ಣದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಸ್ತೆ ವಿಭಾಜಕವನ್ನು ದಾಟಿ ಚರಂಡಿಗೆ ಬಿತ್ತೆನ್ನಲಾಗಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ಬೆಂಕಿ ಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕೋಟ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story




