36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಡುಪಿ, ಜು.27: ಕಳೆದ ಸುಮಾರು 36 ವರ್ಷದಿಂದ ತಲೆಮೆರೆಸಿ ಕೊಂಡಿದ್ದ ವಾರಂಟ್ ಆಸಾಮಿ ಕಾರ್ಕಳ ರಾಮಸಮುದ್ರ ನಿವಾಸಿ ಪೀಟರ್ ಆಗಸ್ಟಿನ್ ಮಾರ್ಟೀಸ್ (60) ಎಂಬವರನ್ನು ಜು.27ರಂದು ಕಾರ್ಕಳ ತಾಲೂಕಿನ ರಾಮಸಮುದ್ರ ಬಳಿ ಕಾರ್ಕಳ ನಗರ ಠಾಣಾ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ವಶಕ್ಕೆ ಪಡೆದು ಬಂಧಿಸಿದ್ದಾರೆ.
ಬಂಧಿತನನ್ನು ಕಾರ್ಕಳ ಪಿ.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ..
Next Story




