Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೈಂದೂರು ಪಟ್ಟಣ ಪಂಚಾಯತ್ ನಿಂದ ಗ್ರಾಮೀಣ...

ಬೈಂದೂರು ಪಟ್ಟಣ ಪಂಚಾಯತ್ ನಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು ಕ್ರಮ: ಸಚಿವ ಬಾಲಕೃಷ್ಣ

ರೈತರ 432 ದಿನದ ಪ್ರತಿಭಟನಾ ಸ್ಥಳಕ್ಕೆ ಪೌರಾಡಳಿತ ಸಚಿವರ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Oct 2026 4:10 PM IST
share
ಬೈಂದೂರು ಪಟ್ಟಣ ಪಂಚಾಯತ್ ನಿಂದ ಗ್ರಾಮೀಣ ಭಾಗಗಳನ್ನು ಕೈಬಿಡಲು ಕ್ರಮ: ಸಚಿವ ಬಾಲಕೃಷ್ಣ

ಬೈಂದೂರು, ಅ.13: ಗ್ರಾಮೀಣ ಭಾಗಗಳನ್ನು ಬೈಂದೂರು ಪಟ್ಟಣ ಪಂಚಾಯತ್ ನಿಂದ ಕೈಬಿಟ್ಟು, ಐದು ಗ್ರಾಮಗಳನ್ನು ಗ್ರಾಪಂಗಳಾಗಿ ರಚಿಸಬೇಕೆಂಬ ರೈತರ ಬೇಡಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. 2020ರಲ್ಲಿ ಅವೈಜ್ಞಾನಿಕವಾಗಿ ಆಗಿರುವ ಸಮಸ್ಯೆಗೆ 2027ರಲ್ಲಿ ವೈಜ್ಞಾನಿಕವಾಗಿ ಮುಕ್ತಿ ನೀಡಲಿದ್ದೇವೆ. ಜಿಲ್ಲಾಧಿಕಾರಿ ಸ್ಪಷ್ಟವಾದ ವರದಿ ಸಿದ್ಧಪಡಿಸಿಕೊಟ್ಟ ತಕ್ಷಣವೇ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಪೌರಾಡಳಿತ ಸಚಿವ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದ್ದಾರೆ.

ಬೈಂದೂರಿನ ಗ್ರಾಮೀಣ ಪ್ರದೇಶಗಳನ್ನು ಅವೈಜ್ಞಾನಿಕವಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಆರೋಪಿಸಿ ಹಾಗೂ ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ನಿಂದ ಕೈಬಿಟ್ಟು ಗ್ರಾಮಪಂಚಾಯತ್ ಆಗಿ ರಚಿಸಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು 432 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಹೋರಾಟದ ವೇದಿಕೆಗೆ ಮಂಗಳವಾರ ಭೇಟಿ ನೀಡಿ ಅವರು ಮಾತನಾಡುತ್ತಿದ್ದರು.

ನಮ್ಮದು ರೈತರ ಸರಕಾರ. ಒಂದೊಮ್ಮೆ ಅನುಷ್ಠಾನ ಮಾಡಲಾಗದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಮ್ಮೊಂದಿಗೆ ಧರಣಿಗೆ ಬರುತ್ತೇನೆ. ಯಾವುದೇ ಆತಂಕ-ಅನುಮಾನ ಬೇಡ. ರೈತರ ಬೇಡಿಕೆ ಈಡೇರಿಸುತ್ತೇವೆ ಎಂದು ಸಚಿವರು ತಿಳಿಸಿದರು.

ಸಂವಿಧಾನದ ಆಶಯದಂತೆ ಸರಕಾರ ಕೆಲಸ ಮಾಡುತ್ತಿದೆ. ಕಾನೂನು ಅಡಚಣೆಯನ್ನು ಜನರ ಹಿತಕ್ಕಾಗಿ ತಿದ್ದುಪಡಿ ಮಾಡುವ ಎಲ್ಲಾ ಅವಕಾಶಗಳಿವೆ. ಇಂದಿಗೆ ರೈತರು ವರ್ಷದ ತಮ್ಮ ಹೋರಾಟಕ್ಕೆ ಇತಿಶ್ರೀ ಹಾಡಿ. ಸರಕಾರ ನಿಮ್ಮೆಂದಿಗಿದೆ. ಮುಖ್ಯಮಂತ್ರಿ ಸಮಸ್ಯೆ ಬಗೆಹರಿಸಲು ನೀಡಿದ ನಿರ್ದೆಶನದಂತೆ ಇಲ್ಲಿನ ನಾಯಕರು ತಿಳಿಸಿದಂತೆ ರೈತರ ಬೇಡಿಕೆಗಳನ್ನು ಸಚಿವ ಸಂಪುಟದಲ್ಲಿ ಅನುಮೋದಿಸಲಿದ್ದು, 2027ರ ಜನಗಣತಿ ಕಾರ್ಯ ಜಾಲ್ತಿಯಲ್ಲಿದ್ದು, ಆ ಪ್ರಕ್ರಿಯೆ ಮುಗಿದ ತಕ್ಷಣವೇ ಅನುಷ್ಠಾನಗೊಳಿಸಲಾಗುತ್ತದೆ. ತಕ್ಷಣವೇ ಚುನಾವಣೆಯೂ ನಡೆಯಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, ಯಾರೋ ಮಾಡಿದ ತಪ್ಪಿಗೆ ರೈತರು ವರ್ಷಗಳ ಕಾಲ ಶಿಕ್ಷೆ ಅನುಭವಿಸುವಂತಾಯಿತು. 432 ದಿನಗಳ ಈ ಮುಷ್ಕರ ಚುನಾಯಿತ ಪ್ರತಿನಿಧಿಗಳಾದ ನಮಗೆಲ್ಲರಿಗೂ ಅವಮಾನದ ಸಂಗತಿಯಾಗಿದೆ. ಮುಂದೆ ಈ ವಿಚಾರದಲ್ಲಿ ಜಿಲ್ಲಾಧಿಕಾರಿ ನೀಡುವ ವರದಿಗೆ ಪೂರಕವಾಗಿ ಸರಕಾರ ಕ್ರಮ ವಹಿಸಲಿದೆ. ಪೌರಾಡಳಿತ ಸಚಿವರು ರಾಜಕೀಯ ಸಿದ್ಧಾಂತ ಬದಿಗಿಟ್ಟು ಜನರ ಸಿದ್ಧಾಂತವನ್ನು ಒಪ್ಪಿಕೊಂಡವರಾಗಿದ್ದು ರೈತಪರವಾದ ಕಾರ್ಯ ಆಗಲಿದೆ ಎಂದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿದರು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಬೈಂದೂರು ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಟಿ.ನಾರಾಯಣ ಹೆಗ್ಡೆ, ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ ಪೂಜಾರಿ, ಖಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಮಾಜಿ ಸದಸ್ಯ ಸುರೇಶ ಬಟವಾಡಿ, ಸ್ಥಳೀಯ ಚರ್ಚಿನ ಗುರುಗಳಾದ ಸನ್ನಿ ಫಾದರ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ನಾಡ, ಬೈಂದೂರು ತಹಶಿಲ್ದಾರ್ ರವಿರಾಜ್ ದೀಕ್ಷಿತ್, ಉಪ ತಹಶಿಲ್ದಾರ್ ರಾಮಚಂದ್ರಪ್ಪ, ಹೋರಾಟದ ಪ್ರಮುಖರಾದ ಕೃಷ್ಣ ದೇವಾಡಿಗ, ಮ್ಯಾಥ್ಯೂ ಕೆ.ಎಸ್, ಪದ್ಮಾಕ್ಷ ಪೂಜಾರಿ ಮೊದಲಾದವರಿದ್ದರು.

ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೈತಪರ ಹೋರಾಟಗಾರರಾದ ಅರುಣ್ ಕುಮಾರ್ ಶಿರೂರು ಕಾರ್ಯಕ್ರಮ ನಿರೂಪಿಸಿದರು. ವೀರಭದ್ರ ಗಾಣಿಗ ವಂದಿಸಿದರು.

ರೈತರಿಂದ ಹರ್ಷೋದ್ಘಾರ

ಪ್ರತಿಭಟನಾ ಸ್ಥಳಕ್ಕೆ ಪೌರಾಡಳಿತ ಸಚಿವರ ಭೇಟಿ ಸಲುವಾಗಿ ಸಾವಿರಾರು ಸಂಖ್ಯೆಯ ರೈತರು ಹಸಿರು ಶಾಲು ಧರಿಸಿ ಬೈಂದೂರು ಆಡಳಿತ ಸೌಧದ ಎದುರು ಜಮಾಯಿಸಿದ್ದರು. ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಬಿಸಿಲಿನಲ್ಲಿಯೇ ಕೂತು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ರೈತರಿಂದ ’ಜೈ ಜವಾನ್-ಜೈ ಕಿಸಾನ್’ ಘೋಷಣೆ ಕೇಳಿ ಬಂತು. ಸ್ಥಳಕ್ಕೆ ಆಗಮಿಸಿದ ಸಚಿವರು ‘ರೈತರಿಗೆ ಆತಂಕ ಬೇಡ- ನಿಮ್ಮೊಂದಿಗಿದ್ದೇವೆ’ ಎಂದು ಸಮಸ್ಯೆ ಪರಿಹಾರದ ಭರವಸೆ ನೀಡಿದಾಗ ರೈತರು ಹರ್ಷೋದ್ಘಾರ ವ್ಯಕ್ತಪಡಿಸಿದರು.

‘ಕಳೆದ 432 ದಿನಗಳಿಂದ ಸ್ಥಳೀಯಾಡಳಿತ, ಜಿಲ್ಲಾಡಳಿತ, ಸರಕಾರ ಮಟ್ಟದಲ್ಲಿ ನಿರಂತರವಾಗಿ ಹೋರಾಟ ಮಾಡಿದ್ದೇವೆ. ಈ ಭಾಗದ ರೈತರು, ಮುಗ್ಧ ಜನರ ಪರವಾದ ಯಾವುದೇ ಪಕ್ಷ-ರಾಜಕೀಯ ಇಲ್ಲದ ಸ್ವಾಂತಂತ್ರ್ಯ ಸಂಗ್ರಾಮ ಮಾದರಿಯಲ್ಲಿ ನಮ್ಮ ಹಕ್ಕೊತ್ತಾಯ ಸಲ್ಲಿಸಲಾಗಿತ್ತು. ಹಾಲಿ, ಮಾಜಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸರಕಾರ ರೈತರ ಪರವಾಗಿ ಕೆಲಸ ಮಾಡಿದ್ದು, ನಮ್ಮ ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಈ ಜಯ ರೈತರದ್ದು’

-ದೀಪಕ್ ಕುಮಾರ್ ಶೆಟ್ಟಿ,

ಅಧ್ಯಕ್ಷರು ಬೈಂದೂರು ತಾಲೂಕು ರೈತ ಸಂಘ

.

Tags

Exclude Rural Areas from Byndoor Town PanchayatMinister Balakrishna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X